Advertisement

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 477 ಅಂಕ ಏರಿಕೆ, 17ಸಾವಿರ ಗಡಿದಾಟಿದ ನಿಫ್ಟಿ

04:43 PM Dec 28, 2021 | Team Udayavani |

ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಪಾಸಿಟಿವ್ ಟ್ರೆಂಡ್ ಹಿನ್ನೆಲೆಯಲ್ಲಿ ಮಂಗಳವಾರ (ಡಿಸೆಂಬರ್ 28) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 477 ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.

Advertisement

ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 477.24 ಅಂಕ ಏರಿಕೆಯಾಗಿದ್ದು, 57,897.48 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 147.20 ಅಂಕಗಳಷ್ಟು ಏರಿಕೆಯೊಂದಿಗೆ 17,233.45 ಅಂಕಗಳ ಮಟ್ಟದಲ್ಲಿ ವಹಿವಾಟು ಅಂತ್ಯಗೊಂಡಿದೆ.

ಏಷ್ಯನ್ ಪೇಂಟ್ಸ್, ಸನ್ ಫಾರ್ಮಾ, ಮಹೀಂದ್ರ ಆ್ಯಂಡ್ ಮಹೀಂದ್ರ, ಎನ್ ಟಿಪಿಸಿ, ಆಲ್ಟ್ರಾ ಟೆಕ್ ಸಿಮೆಂಟ್, ಟೈಟಾನ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಇಂಡಸ್ ಇಂಡ್ ಬ್ಯಾಂಕ್, ಪವರ್ ಗ್ರಿಡ್ ಷೇರುಗಳು ನಷ್ಟ ಕಂಡಿದೆ.

ಇಂದು ಬೆಳಗ್ಗೆ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 320.31 ಅಂಕಗಳಷ್ಟು ಏರಿಕೆಯೊಂದಿಗೆ 57,740.55 ಅಂಕಗಳಲ್ಲಿ ವಹಿವಾಟು ನಡೆಸಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 94.70 ಅಂಕಗಳಷ್ಟು ಏರಿಕೆಯಾಗಿದ್ದು, 17,180.95 ಅಂಕಗಳ ಮಟ್ಟ ತಲುಪಿತ್ತು.

Advertisement

Udayavani is now on Telegram. Click here to join our channel and stay updated with the latest news.

Next