ಮುಂಬಯಿ: ಒಮಿಕ್ರಾನ್, ಕೋವಿಡ್ ಸೋಂಕಿನ ಭೀತಿಯ ನಡುವೆಯೂ ಮುಂಬಯಿ ಷೇರುಪೇಟೆಯಲ್ಲಿ ಬುಧವಾರ(ಡಿಸೆಂಬರ್ 29) ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 100ಕ್ಕೂ ಅಧಿಕ ಅಂಕಗಳಷ್ಟು ಏರಿಕೆ ಕಂಡಿದೆ.
ಇದನ್ನೂ ಓದಿ:ದರ್ಶನ್ ಬರ್ತ್‌ಡೇಗೂ 50ದಿನ ಮೊದಲೇ ಕಾಮನ್ ಡಿಪಿ
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 104.31 ಅಂಕಗಳಷ್ಟು ಏರಿಕೆಯೊಂದಿಗೆ 58,001.79 ಅಂಕಗಳಲ್ಲಿ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 28.45 ಅಂಕ ಏರಿಕೆಯಾಗಿದ್ದು, 17,261.70 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಇಂಡಸ್ ಇಂಡ್ ಬ್ಯಾಂಕ್ , ಡಾ.ರೆಡ್ಡೀಸ್ ಲ್ಯಾಬೋರೇಟರಿ, ಐಸಿಐಸಿಐ ಬ್ಯಾಂಕ್, ಸನ್ ಫಾರ್ಮಾ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಆ್ಯಕ್ಸಿಸ್ ಬ್ಯಾಂಕ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಪವರ್ ಗ್ರಿಡ್, ಎನ್ ಟಿಪಿಸಿ, ಟಾಟಾ ಸ್ಟೀಲ್, ಎಚ್ ಡಿಎಫ್ ಸಿ ಬ್ಯಾಂಕ್, ನೆಸ್ಲೆ ಇಂಡಿಯಾ ಷೇರುಗಳು ನಷ್ಟ ಕಂಡಿದೆ.
ಮಂಗಳವಾರ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 477.24 ಅಂಕಗಳಷ್ಟು ಏರಿಕೆಯೊಂದಿಗೆ 57,897.48 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿತ್ತು. ಎನ್ ಎಸ್ ಇ ನಿಫ್ಟಿ 147.20 ಅಂಕಗಳಷ್ಟು ಏರಿಕೆಯಾಗಿದ್ದು, 17,233.45 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿತ್ತು.