ಮುಂಬಯಿ: ಜಾಗತಿಕ ಮಾರುಕಟ್ಟೆಯಲ್ಲಿನ ಸಕಾರಾತ್ಮಕ ಬೆಳವಣಿಗೆ ಹಾಗೂ ವಿದೇಶಿ ಬಂಡವಾಳದ ಒಳಹರಿವಿನ ಪರಿಣಾಮ ಬುಧವಾರ(ಮಾರ್ಚ್ 10) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 300ಕ್ಕೂ ಅಧಿಕ ಅಂಕ ಏರಿಕೆಯಾಗಿದೆ.
ಇದನ್ನೂ ಓದಿ:ತೈಲ ಬೆಲೆ ಇಳಿಕೆಗೆ ಬ್ರೆಂಟ್ ಕಚ್ಚಾ ತೈಲ ಬೆಲೆ ಏರಿಕೆ ಅಡ್ಡಿಯಾಗುತ್ತಿದೆಯೆ..!?
ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ಷೇರುಪೇಟೆ ಸಂವೇದಿ ಸೂಚ್ಯಂಕ 329.15 ಅಂಕ ಏರಿಕೆಯೊಂದಿಗೆ 51,354.63 ಅಂಕಗಳ ಗಡಿ ದಾಟಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 15,194.15ರ ಗಡಿ ಮುಟ್ಟಿದೆ.
ಸಂವೇದಿ ಸೂಚ್ಯಂಕ ಏರಿಕೆಯಿಂದ ಇಂಡಸ್ ಇಂಡ್ ಬ್ಯಾಂಕ್, ಬಜಾಜ್ ಫೈನಾನ್ಸ್, ಮಹೀಂದ್ರಾ ಆ್ಯಂಡ್ ಮಹೀಂದ್ರಾ, ಎಚ್ ಡಿಎಫ್ ಸಿ, ಇನ್ಫೋಸಿಸ್, ಎಚ್ ಸಿಎಲ್ ಟೆಕ್, ಟೈಟಾನ್, ಬಜಾಜ್ ಫಿನ್ ಸರ್ವ್, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಲಾಭಗಳಿಸಿವೆ.
ಮತ್ತೊಂದೆಡೆ ಒಎನ್ ಜಿಸಿ, ಭಾರ್ತಿ ಏರ್ ಟೆಲ್, ಐಟಿಸಿ ಮತ್ತು ನೆಸ್ಲೆ ಇಂಡಿಯಾ ಷೇರುಗಳು ಸತತ ನಷ್ಟ ಕಂಡಿರುವುದಾಗಿ ಷೇರುಮಾರುಕಟ್ಟೆ ವರದಿ ತಿಳಿಸಿದೆ.