ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಮಿಶ್ರ ವಹಿವಾಟಿನ ಪರಿಣಾಮ ಮುಂಬಯಿ ಷೇರುಪೇಟೆ ಮೇಲೆ ಬೀರಿದ್ದು, ಸೋಮವಾರ(ಮೇ 24)ದ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 300ಕ್ಕೂ ಅಧಿಕ ಅಂಕ ಏರಿಕೆ ಕಂಡಿದೆ.
ಇದನ್ನೂ ಓದಿ:ಮುಗಿಲ್ ಪೇಟೆ ಚಿತ್ರದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರ ಖಾತೆಗೂ 5 ಸಾವಿರ ಹಣ ಹಾಕಿದ ಮನುರಂಜನ್
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 310.72 ಅಂಕಗಳ ಏರಿಕೆಯೊಂದಿಗೆ 50,851.20 ಅಂಕಗಳ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 71.90 ಅಂಕಗಳ ಏರಿಕೆಯೊಂದಿಗೆ 15,247.20ರ ಗಡಿ ದಾಟಿದೆ.
ಸೆನ್ಸೆಕ್ ಏರಿಕೆಯಿಂದ ಪವರ್ ಗ್ರಿಡ್, ಎಸ್ ಬಿಐ, ಎಲ್ ಆ್ಯಂಡ್ ಟಿ, ಎಚ್ ಡಿಎಫ್ ಸಿ ಬ್ಯಾಂಕ್, ಮಾರುತಿ, ಆ್ಯಕ್ಸಿಸ್ ಬ್ಯಾಂಕ್ ಮತ್ತು ಡಾ.ರೆಡ್ಡೀಸ್ ಷೇರುಗಳು ಲಾಭಗಳಿಸಿವೆ.
ಮತ್ತೊಂದೆಡೆ ಟೈಟಾನ್, ಮಹೀಂದ್ರಾ ಆ್ಯಂಡ್ ಮಹೀಂದ್ರಾ, ಇಂಡಸ್ ಇಂಡ್ ಬ್ಯಾಂಕ್ ಮತ್ತು ಎಚ್ ಯುಎಲ್ ಷೇರುಗಳು ನಷ್ಟ ಅನುಭವಿಸಿದೆ. ಶುಕ್ರವಾರ ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ 975.62 ಅಂಕಗಳಷ್ಟು ಕುಸಿತ ಕಂಡು 50,540.48 ಅಂಕಗಳೊಂದಿಗೆ ವಹಿವಾಟು ಕೊನೆಗೊಳಿಸಿತ್ತು.