ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಪಾಸಿಟಿವ್ ಟ್ರೆಂಡ್ ಪರಿಣಾಮ ಮಂಗಳವಾರ (ಡಿಸೆಂಬರ್ 28) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 300ಕ್ಕೂ ಹೆಚ್ಚು ಅಂಕಗಳಷ್ಟು ಏರಿಕೆ ಕಂಡಿದೆ.
ಇದನ್ನೂ ಓದಿ:ಇಂದಿನಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ: ಈ ನಿಯಮಗಳನ್ನು ಪಾಲಿಸಲೇಬೇಕು
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 320.31 ಅಂಕಗಳಷ್ಟು ಏರಿಕೆಯೊಂದಿಗೆ 57,740.55 ಅಂಕಗಳಲ್ಲಿ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 94.70 ಅಂಕಗಳಷ್ಟು ಏರಿಕೆಯಾಗಿದ್ದು, 17,180.95 ಅಂಕಗಳ ಮಟ್ಟ ತಲುಪಿದೆ.
ಏಷ್ಯನ್ ಪೇಂಟ್ಸ್, ಟೆಕ್ ಮಹೀಂದ್ರ, ಎಲ್ ಆ್ಯಂಡ್ ಟಿ, ಇನ್ಫೋಸಿಸ್, ಎಚ್ ಸಿಎಲ್ ಟೆಕ್ ಮತ್ತು ಪವರ್ ಗ್ರಿಡ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಡಾ.ರೆಡ್ಡೀಸ್ ಷೇರು ಮಾತ್ರ ನಷ್ಟ ಕಂಡಿದೆ.
ಸೋಮವಾರ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 295.93 ಅಂಕ ಏರಿಕೆಯೊಂದಿಗೆ 57,420.24 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿತ್ತು. ಎನ್ ಎಸ್ ಇ ನಿಫ್ಟಿ 82.50 ಅಂಕ ಏರಿಕೆಯಾಗಿದ್ದು, 17,086.25 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿತ್ತು.