ಮುಂಬಯಿ: ಜಾಗತಿಕ ಹಾಗೂ ಏಷ್ಯನ್ ಷೇರುಮಾರುಕಟ್ಟೆಯಲ್ಲಿನ ಮಿಶ್ರ ವಹಿವಾಟಿನ ಪರಿಣಾಮ ಶುಕ್ರವಾರ (ಡಿಸೆಂಬರ್ 31) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 350ಕ್ಕೂ ಅಧಿಕ ಅಂಕಗಳ ವಹಿವಾಟು ನಡೆಸಿದೆ.
ಇದನ್ನೂ ಓದಿ:ಕೊರಗರು, ಗಿರಿ ಜನರು, ದಲಿತ ಬಂಧುಗಳು ಭಯ ಪಡುವ ಅವಶ್ಯಕತೆಯಿಲ್ಲ: ಕೋಟ ಶ್ರೀನಿವಾಸ್ ಪೂಜಾರಿ
ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ ಆರಂಭಿಕವಾಗಿ 364.54 ಅಂಕಗಳಷ್ಟು ಏರಿಕೆಯೊಂದಿಗೆ 58,158.54 ಅಂಕಗಳಲ್ಲಿ ವಹಿವಾಟು ಮುಂದುವರಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 104.05 ಅಂಕಗಳಷ್ಟು ಏರಿಕೆಯಾಗಿದ್ದು, 17,308 ಅಂಕಗಳ ಮಟ್ಟ ತಲುಪಿದೆ.
ಟೈಟಾನ್, ಆ್ಯಕ್ಸಿಸ್ ಬ್ಯಾಂಕ್, ಕೋಟಕ್ ಬ್ಯಾಂಕ್, ಆಲ್ಟ್ರಾಟೆಕ್ ಸಿಮೆಂಟ್, ಐಸಿಐಸಿಐ ಬ್ಯಾಂಕ್, ಮಹೀಂದ್ರ ಆ್ಯಂಡ್ ಮಹೀಂದ್ರ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಎಚ್ ಡಿಎಫ್ ಸಿ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಎನ್ ಟಿಪಿಸಿ, ಟೆಕ್ ಮಹೀಂದ್ರ, ಇಂಡಸ್ ಇಂಡ್ ಬ್ಯಾಂಕ್ ಮತ್ತು ಇನ್ಫೋಸಿಸ್ ಷೇರುಗಳು ನಷ್ಟ ಕಂಡಿದೆ.
ಗುರುವಾರ ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 12.17 ಅಂಕಗಳಷ್ಟು ಅಲ್ಪ ಕುಸಿತದೊಂದಿಗೆ 57,794.32 ಅಂಕಗಳಲ್ಲಿ ವಹಿವಾಟು ಕೊನೆಗೊಳಿಸಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 9.65 ಅಂಕಗಳಷ್ಟು ಇಳಿಕೆಯೊಂದಿಗೆ 17, 203.95 ಅಂಕಗಳ ಮಟ್ಟದಲ್ಲಿ ವಹಿವಾಟು ಅಂತ್ಯಗೊಂಡಿತ್ತು.