ಮುಂಬಯಿ:ಜಾಗತಿಕ ಷೇರುಪೇಟೆಯ ಸಕಾರಾತ್ಮಕ ಬೆಳವಣಿಗೆಯ ಪರಿಣಾಮ ಮುಂಬಯಿ ಷೇರುಮಾರುಕಟ್ಟೆಯ ಸಂವೇದಿ ಸೂಚ್ಯಂಕ ಸೋಮವಾರ(ಮೇ 10) 353 ಅಂಕಗಳಷ್ಟು ಏರಿಕೆ ಕಂಡಿದೆ. ಇದರಿಂದ ಎಚ್ ಡಿಎಫ್ ಸಿ, ಐಸಿಐಸಿಐ ಬ್ಯಾಂಕ್, ಕೋಟಕ್ ಬ್ಯಾಂಕ್ ಷೇರುಗಳು ಹೆಚ್ಚಿನ ಲಾಭಗಳಿಸಿದೆ.
ಇದನ್ನೂ ಓದಿ:ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಲು ಖುದ್ದು ಫೀಲ್ಡಿಗಿಳಿದ ಎಸ್ಪಿ, ಡಿಸಿ
ಮುಂಬಯಿ ಷೇರುಪೇಟೆಯ ಬಿಎಸ್ ಇ ಸಂವೇದಿ ಸೂಚ್ಯಂಕ 353.64 ಅಂಕ ಏರಿಕೆಯಾಗಿದ್ದು, 49,560.11 ಅಂಕಗಳ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 114.85 ಅಂಕಗಳ ಹೆಚ್ಚಳದೊಂದಿಗೆ 14,938ರ ಗಡಿ ತಲುಪಿದೆ.
ಸೆನ್ಸೆಕ್ಸ್ ಏರಿಕೆಯಿಂದ ಡಾ.ರೆಡ್ಡೀಸ್, ಒಎನ್ ಜಿಸಿ, ಎಚ್ ಡಿಎಫ್ ಸಿ, ಇಂಡಸ್ ಇಂಡ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಸನ್ ಫಾರ್ಮಾ ಮತ್ತು ಕೋಟಕ್ ಬ್ಯಾಂಕ್ ಷೇರುಗಳು ಲಾಭ ಗಳಿಸಿವೆ.
ಮತ್ತೊಂದೆಡೆ ಆಲ್ಟ್ರಾಟೆಕ್ ಸಿಮೆಂಟ್, ಬಜಾಜ್ ಫೈನಾನ್ಸ್, ನೆಸ್ಲೆ ಇಂಡಿಯಾ ಮತ್ತು ಇನ್ಫೋಸಿಸ್ ಷೇರುಗಳು ನಷ್ಟ ಕಂಡಿದೆ. ಹಿಂದಿನ ವಹಿವಾಟಿನಲ್ಲಿ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 256.71 ಅಂಕ ಏರಿಕೆಯಾಗಿ 49,206.47 ಅಂಕಗಳೊಂದಿಗೆ ವಹಿವಾಟು ಮುಕ್ತಾಯಗೊಳಿಸಿತ್ತು. ನಿಫ್ಟಿ 14,823ರ ಗಡಿ ತಲುಪಿತ್ತು.