ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ನೆಗೆಟಿವ್ ಟ್ರೆಂಡ್ ಪರಿಣಾಮ ಸೋಮವಾರ(ಜನವರಿ 24)ವೂ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 600 ಅಂಕಗಳಷ್ಟು ಕುಸಿತದೊಂದಿಗೆ ವಹಿವಾಟು ಮುಂದುವರಿದಿದೆ.
ಇದನ್ನೂ ಓದಿ:ನಿಗೂಢವಾಗಿ ನಾಪತ್ತೆಯಾಗಿದ್ದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಶವವಾಗಿ ಪತ್ತೆ
ಇಂದು ಬೆಳಗ್ಗೆ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 59,000 ಅಂಕಗಳಿಗಿಂತ ಕೆಳಕ್ಕೆ ವಹಿವಾಟು ನಡೆಸಿದ್ದು, ಎನ್ ಎಸ್ ಇ ನಿಫ್ಟಿ ಕೂಡಾ 17,400 ಅಂಕಗಳ ಮಟ್ಟದಲ್ಲಿದೆ.
ಮಾರುತಿ ಸುಜುಕಿ, ಐಸಿಐಸಿಐ ಬ್ಯಾಂಕ್, ಪವರ್ ಗ್ರಿಡ್ ಕಾರ್ಪೋರೇಶನ್, ಇಂಡಸ್ ಇಂಡ್ ಬ್ಯಾಂಕ್, ಭಾರ್ತಿ ಏರ್ ಟೆಲ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಏಷ್ಯನ್ ಪೇಂಟ್ಸ್, ಬಜಾಜ್ ಫಿನ್ ಸರ್ವ್, ಟೆಕ್ ಮಹೀಂದ್ರ, ವಿಪ್ರೋ, ಇನ್ಫೋಸಿಸ್, ಟೈಟಾನ್ ಕಂಪನಿ, ಎಚ್ ಸಿಎಲ್ ಟೆಕ್ ಷೇರುಗಳು ನಷ್ಟ ಕಂಡಿದೆ.
ಸೋಮವಾರ ಜೊಮೊಟೋ ಷೇರು ಬೆಲೆ ಶೇ.20ರಷ್ಟು ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇಂದು ಜೊಮೊಟೋ ಪ್ರತಿ ಷೇರಿನ ಬೆಲೆ 92.65(21.05 ರೂಪಾಯಿ ಇಳಿಕೆ) ರೂಪಾಯಿಗೆ ಕುಸಿತ ಕಂಡಿದೆ. ಇದರ ಪರಿಣಾಮ ಕಂಪನಿಯು 2022ರ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕ 785.80 ಕೋಟಿ ರೂಪಾಯಿ ನಷ್ಟ ಕಂಡಂತಾಗಿದೆ.