Advertisement

ಹೂಡಿಕೆದಾರರಿಗೆ ಲಕ್ಷಾಂತರ ರೂ. ನಷ್ಟ; ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 1,158 ಅಂಕ ಕುಸಿತ

04:31 PM Oct 28, 2021 | Team Udayavani |

ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯ ಧನಾತ್ಮಕ ವಹಿವಾಟಿನ ಪರಿಣಾಮ ಸತತವಾಗಿ ಏರಿಕೆ ಕಾಣುತ್ತಿದ್ದ ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಗುರುವಾರ(ಅಕ್ಟೋಬರ್ 28) ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದ್ದು, ಹೂಡಿಕೆದಾರರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

Advertisement

ಇದನ್ನೂ ಓದಿ:ನೆಟ್ಸ್ ನಲ್ಲಿ ಬೌಲಿಂಗ್ ಮಾಡಿದ ಹಾರ್ದಿಕ್: ಕಿವೀಸ್ ವಿರುದ್ಧ ಆಡುವುದು ಬಹುತೇಕ ಖಚಿತ

ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 1,158 ಅಂಕಗಳಷ್ಟು ಕುಸಿತ ಕಂಡಿದ್ದು, 59.984.70 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟನ್ನು ಕೊನೆಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 353.70 ಅಂಕಗಳಷ್ಟು ಇಳಿಕೆಯಾಗಿದ್ದು, 17,857.30 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ.

ಅದಾನಿ ಪೋರ್ಟ್ಸ್, ಐಟಿಸಿ, ಒಎನ್ ಜಿಸಿ, ಐಸಿಐಸಿಐ ಬ್ಯಾಂಕ್, ಕೋಟಕ್ ಮಹೀಂದ್ರ ಬ್ಯಾಂಕ್ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಇಂಡಸ್ ಇಂಡ್ ಬ್ಯಾಂಕ್, ಎಲ್ ಆ್ಯಂಡ್ ಟಿ, ಆಲ್ಟ್ರಾಟೆಕ್ ಸಿಮೆಂಟ್, ಏಷ್ಯನ್ ಪೇಂಟ್ಸ್ ಮತ್ತು ಶ್ರೀ ಸಿಮೆಂಟ್ ಷೇರುಗಳು ಲಾಭಗಳಿಸಿದೆ.

ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಅಕ್ಟೋಬರ್ ತಿಂಗಳಿನಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ ಇದೇ ಮೊದಲ ಬಾರಿ 18,000ಗಡಿಯನ್ನು ದಾಟಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next