Advertisement

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 400ಕ್ಕೂ ಅಧಿಕ ಅಂಕ ಇಳಿಕೆ; ನಷ್ಟ ಕಂಡ ರಿಲಯನ್ಸ್ ಷೇರು

12:11 PM Nov 22, 2021 | Team Udayavani |

ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ನಿಧಾನಗತಿಯ ವಹಿವಾಟು ಮತ್ತು ವಿದೇಶಿ ಬಂಡವಾಳದ ಹರಿವು ಸರಾಗವಾಗಿ ಮುಂದುವರಿದಿರುವ ಪರಿಣಾಮ ಸೋಮವಾರ ಬಾಂಬೆ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ ಕಂಡಿದೆ.

Advertisement

ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 435.74 ಅಂಕ ಇಳಿಕೆಯಾಗಿದ್ದು, 59,200.27 ಅಂಕಗಳಲ್ಲಿ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 129.85 ಅಂಕ ಇಳಿಕೆಯಾಗಿದ್ದು, 17,634.95 ಅಂಕಗಳಲ್ಲಿ ವಹಿವಾಟು ಮುಂದುವರಿಸಿದೆ.

ಸೆನ್ಸೆಕ್ಸ್, ನಿಫ್ಟಿ ಕುಸಿತದಿಂದ ರಿಲಯನ್ಸ್ ಇಂಡಸ್ಟ್ರೀಸ್, ಮಾರುತಿ, ಬಜಾಜ್ ಫೈನಾನ್ಸ್, ಕೋಟಕ್ ಬ್ಯಾಂಕ್ ಮತ್ತು ಬಜಾಜ್ ಫಿನ್ ಸರ್ವ್ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಭಾರ್ತಿ ಏರ್ ಟೆಲ್, ಪವರ್ ಗ್ರಿಡ್, ಏಷ್ಯನ್ ಪೇಂಟ್ಸ್, ಇಂಡಸ್ ಬ್ಯಾಂಕ್ ಮತ್ತು ಐಟಿಸಿ ಷೇರು ಲಾಭಗಳಿಸಿದೆ.

ಬಾಂಬೆ ಷೇರುಪೇಟೆಯ ಹಿಂದಿನ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 372.32 ಅಂಕ ಇಳಿಕೆಯಾಗಿದ್ದು, 59,636.01 ಅಂಕಗಳಲ್ಲಿ ವಾರಾಂತ್ಯದ ವಹಿವಾಟು ಮುಕ್ತಾಯಗೊಂಡಿತ್ತು. ಎನ್ ಎಸ್ ಇ ನಿಫ್ಟಿ 133.85 ಅಂಕ ಕುಸಿತವಾಗಿದ್ದು, 17,764.80 ಅಂಕಗಳೊಂದಿಗೆ ವಹಿವಾಟು ಕೊನೆಗೊಂಡಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next