ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯ ಮಿಶ್ರ ವಹಿವಾಟಿನ ಪರಿಣಾಮ ಮಂಗಳವಾರ(ನವೆಂಬರ್ 16) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 396 ಅಂಕಗಳಷ್ಟು ಇಳಿಕೆಯಾಗುವ ಮೂಲಕ ದಿನಾಂತ್ಯದ ವಹಿವಾಟನ್ನು ಕೊನೆಗೊಳಿಸಿದೆ.
ಇದನ್ನೂ ಓದಿ:ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪುರಸ್ಕಾರ: ಸಿಎಂ ಘೋಷಣೆ
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 396.34 ಅಂಕ ಇಳಿಕೆಯಾಗಿದ್ದು, 60,322.37 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟನ್ನು ಅಂತ್ಯಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 110.25 ಅಂಕ ಇಳಿಕೆಯಾಗಿದ್ದು, 17,999.20 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿದೆ.
ಸೆನ್ಸೆಕ್ಸ್, ನಿಫ್ಟಿ ನಷ್ಟದಿಂದ ರಿಲಯನ್ಸ್ ಇಂಡಸ್ಟ್ರೀಸ್, ಎಸ್ ಬಿಐ, ಆಲ್ಟ್ರಾಟೆಕ್ ಸಿಮೆಂಟ್, ಇಂಡಸ್ ಇಂಡ್ ಬ್ಯಾಂಕ್, ಎನ್ ಟಿಪಿಸಿ ಮತ್ತು ಸನ್ ಫಾರ್ಮಾ ಷೇರುಗಳು ನಷ್ಟ ಕಂಡಿದೆ. ಏತನ್ಮಧ್ಯೆ ಮಾರುತಿ, ಮಹೀಂದ್ರ ಆ್ಯಂಡ್ ಮಹೀಂದ್ರ, ಬಜಾಜ್ ಫೈನಾನ್ಸ್, ಇನ್ಫೋಸಿಸ್, ಬಜಾಜ್ ಫಿನ್ ಸರ್ವ್ ಷೇರುಗಳು ಲಾಭಗಳಿಸಿದೆ.
ಜಾಗತಿಕವಾಗಿ ಶಾಂಘೈ, ಸಿಯೋಲ್ ಷೇರು ಮಾರುಕಟ್ಟೆ ಸೆನ್ಸೆಕ್ಸ್ ಕುಸಿತ ಕಂಡಿದ್ದು, ಹಾಂಗ್ ಕಾಂಗ್ ಮತ್ತು ಟೋಕಿಯೋ ಷೇರುಪೇಟೆ ಸೆನ್ಸೆಕ್ಸ್ ಏರಿಕೆ ಕಂಡಿದೆ. ಯುರೋಪ್ ಷೇರುಮಾರುಕಟ್ಟೆ ವಹಿವಾಟಿನಲ್ಲಿ ಲಾಭಗಳಿಸಿದೆ.