ಮುಂಬಯಿ:ಏಷ್ಯಾದ ಷೇರುಮಾರುಕಟ್ಟೆಯಲ್ಲಿನ ನೀರಸ ವಹಿವಾಟಿನ ಪರಿಣಾಮ ಸೋಮವಾರ (ಏಪ್ರಿಲ್ 25) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 602 ಅಂಕಗಳಷ್ಟು ಕುಸಿತದೊಂದಿಗೆ ವಹಿವಾಟು ಮುಂದುವರಿದಿದೆ.
ಇದನ್ನೂ ಓದಿ:ದಾಖಲೆ: ಕೆಜಿಎಫ್ ಚಾಪ್ಟರ್ 2 ಸಿನಿಮಾ; ಜಗತ್ತಿನಾದ್ಯಂತ ಈವರೆಗೆ ಬಾಕ್ಸಾಫೀಸ್ ಗಳಿಕೆ ಎಷ್ಟು?
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ 785 ಅಂಕ ಕುಸಿತಗೊಂಡಿತ್ತು. ನಂತರ 647.28 ಅಂಕ ಕುಸಿತಗೊಂಡಿದ್ದು, 56,546.96 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 243.35 ಅಂಕ ಇಳಿಕೆಯಾಗಿದ್ದು, 16,928.60 ಅಂಕಗಳಲ್ಲಿ ವಹಿವಾಟು ನಡೆದಿದೆ.
ಸೆನ್ಸೆಕ್ಸ್, ನಿಫ್ಟಿ ಕುಸಿತದ ಪರಿಣಾಮ ಹಿಂದೂಸ್ತಾನ್ ಯೂನಿಲಿವರ್, ಟಾಟಾ ಸ್ಟೀಲ್, ಇಂಡಸ್ ಇಂಡ್ ಬ್ಯಾಂಕ್, ವಿಪ್ರೋ, ಎಲ್ ಆ್ಯಂಡ್ ಟಿ, ಟೆಕ್ ಮಹೀಂದ್ರ, ಟೈಟಾನ್, ಟಿಸಿಎಸ್, ಏಷ್ಯನ್ ಪೇಂಟ್ಸ್, ಇನ್ಫೋಸಿಸ್ ಷೇರುಗಳು ನಷ್ಟ ಕಂಡಿದೆ.
ಮತ್ತೊಂದೆಡೆ ಐಸಿಐಸಿಐ ಬ್ಯಾಂಕ್ ಮತ್ತು ಮಾರುತಿ ಷೇರುಗಳು ಲಾಭಗಳಿಸಿದೆ. ಶುಕ್ರವಾರ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 714.53 ಅಂಕ ಇಳಿಕೆಯಾಗಿದ್ದು, 57,197.15 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿತ್ತು. ಎನ್ ಎಸ್ ಇ ನಿಫ್ಟಿ 220.65 ಅಂಕ ಕುಸಿತಗೊಂಡಿದ್ದು, 17,171.95 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿತ್ತು.