ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ನೀರಸ ವಹಿವಾಟು ಮತ್ತು ಜಾಗತಿಕ ಈಕ್ವಿಟೀಸ್ ಗಳ ನಷ್ಟದ ಪರಿಣಾಮ ಸೋಮವಾರ (ಏ.11) ಮುಂಬಯಿ ಷೇರುಪೇಟೆ ಸೂಚ್ಯಂಕ ಸುಮಾರು 483 ಅಂಕಗಳಷ್ಟು ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ಚುನಾವಣೆ ಗೆದ್ದ ನಂತರ ಬಡವರ ಲೂಟಿ : ಡಿ.ಕೆ ಶಿವಕುಮಾರ್ ಕಿಡಿ
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 482.61 ಅಂಕ ಇಳಿಕೆಯಾಗಿದ್ದು, 58,964.57 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 109.40 ಅಂಕ ಕುಸಿತ ಕಂಡಿದ್ದು, 17,674.95 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ.
ಎಲ್ ಆ್ಯಂಡ್ ಟಿ, ಎಚ್ ಸಿಎಲ್ ಟೆಕ್ನಾಲಜೀಸ್, ಇನ್ಫೋಸಿಸ್, ವಿಪ್ರೋ, ಏಷಿಯನ್ ಪೇಂಟ್ಸ್, ಎಚ್ ಡಿಎಫ್ ಸಿ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಐಸಿಐಸಿಐ ಬ್ಯಾಂಕ್, ಎನ್ ಟಿಪಿಸಿ, ಕೋಟಕ್ ಮಹೀಂದ್ರ ಬ್ಯಾಂಕ್, ಟಿಸಿಎಸ್ ಮತ್ತು ಆಲ್ಟ್ರಾಟೆಕ್ ಸಿಮೆಂಟ್ ಷೇರುಗಳು ಲಾಭಗಳಿಸಿದೆ.
ಹಣದುಬ್ಬರ ಹೆಚ್ಚಳದ ಕಳವಳ, ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿದರ ಏರಿಕೆ ಮತ್ತು ಜಾಗತಿಕ ಮಟ್ಟದಲ್ಲಿನ ವಿದ್ಯಮಾನಗಳ ಹಿನ್ನೆಲೆಯಲ್ಲಿ ಷೇರುಮಾರುಕಟ್ಟೆಯ ವಹಿವಾಟಿನ ಮೇಲೆ ಪರಿಣಾಮ ಬೀರಿರುವುದಾಗಿ ವರದಿ ತಿಳಿಸಿದೆ.