Advertisement

ಕೋವಿಡ್ ಆತಂಕ; ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 450 ಅಂಕ ಕುಸಿತ, 14,400ಕ್ಕೆ ಕುಸಿದ ನಿಫ್ಟಿ

11:44 AM Apr 15, 2021 | |

ಮುಂಬಯಿ:ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಭೀತಿಯ ಹಿನ್ನೆಲೆಯಲ್ಲಿ ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ ಗುರುವಾರ (ಏಪ್ರಿಲ್ 15) 450 ಅಂಕಗಳಷ್ಟು ಕುಸಿತ ಕಂಡಿದೆ.

Advertisement

ಮುಂಬಯಿ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 450 ಅಂಕ ಕುಸಿತ ಕಂಡಿದ್ದು, 48,050 ಅಂಕಗಳ ವಹಿವಾಟು ನಡೆಸಿದೆ. ಅದೇ ರೀತಿ ನಿಫ್ಟಿ 14,400 ಅಂಕಗಳ ಗಡಿಗೆ ಕುಸಿದಿದೆ.

ಓಎನ್ ಜಿಸಿ, ಎನ್ ಟಿಪಿಸಿ, ಕೋಟಕ್ ಮಹೀಂದ್ರ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಹೌಸಿಂಗ್ ಡೆವಲಪ್ ಮೆಂಟ್ ಫೈನಾನ್ಸ್ ಕಾರ್ಪೋರೇಶನ್ ಷೇರುಗಳು ಲಾಭಗಳಿಸಿವೆ.

ಏತನ್ಮಧ್ಯೆ ಇನ್ಫೋಸಿಸ್, ಮಹೀಂದ್ರ ಆ್ಯಂಡ್ ಮಹೀಂದ್ರ, ಇಂಡಸ್ ಇಂಡ್ ಬ್ಯಾಂಕ್, ಮಾರುತಿ ಸುಜುಕಿ, ಬಜಾಜ್ ಫೈನಾನ್ಸ್, ಬಜಾಜ್ ಫಿನ್ ಸರ್ವ್, ಟೆಕ್ ಮಹೀಂದ್ರ ಷೇರುಗಳು ನಷ್ಟ ಅನುಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next