Advertisement

ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಭರ್ಜರಿ 834 ಅಂಕ ಏರಿಕೆ: ನಿಫ್ಟಿ 14,500

04:40 PM Jan 19, 2021 | |

ಮುಂಬೈ :  ಜಾಗತಿಕವಾಗಿ  ಷೇರುಪೇಟೆಗಳಲ್ಲಿನ ಸಕಾರಾತ್ಮಕ ಬೆಳವಣಿಗೆಯಿಂದಾಗಿ ಮಂಗಳವಾರ (ಜನವರಿ 19, 2021) ಮುಂಬೈ ಷೇರುಪೇಟೆ ವಹಿವಾಟಿನ ಮೇಲೂ ಭಾರಿ ಪರಿಣಾಮ ಉಂಟುಮಾಡಿದೆ. ಇದರಿಂದ ಎಚ್ ಡಿಎಫ್ ಸಿ, ಐಸಿಐಸಿಐ ಬ್ಯಾಂಕ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಹೆಚ್ಚಿನ ಲಾಭಗಳಿಸಿದೆ.

Advertisement

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ(ಬಿಎಸ್ ಇ) 834.02 ಅಂಕಗಳಷ್ಟು ಏರಿಕೆಯೊಂದಿಗೆ 49, 398.29 ಅಂಕಗಳೊಂದಿಗೆ ವಹಿವಾಟು ಮುಕ್ತಾಯಗೊಂಡಿದೆ.

ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 239.85 ಅಂಕಗಳಷ್ಟು ಏರಿಕೆಯೊಂದಿಗೆ 14,521.15 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.

ಇಂದಿನ ಭರ್ಜರಿ ಷೇರು ಖರೀದಿ ವಹಿವಾಟಿನಲ್ಲಿ ಬಜಾಜ್ ಫಿನ್ ಸರ್ವ್ ಷೇರು ಶೇ. 7 ರಷ್ಟು ಲಾಭ ಕಂಡುಕೊಂಡಿದೆ. ಇನ್ನುಳಿದಂತೆ ಬಜಾಜ್ ಫೈನಾನ್ಸ್, ಎಚ್ ಡಿಎಫ್ ಸಿ, ಎಲ್ ಆ್ಯಂಡ್ ಟಿ, ಐಸಿಐಸಿಐ ಬ್ಯಾಂಕ್, ಸನ್ ಫಾರ್ಮಾ ಮತ್ತು ಎನ್ ಟಿಪಿಸಿ ಷೇರುಗಳು ಲಾಭ ಗಳಿಸಿದೆ. ಇಂದಿನ ಷೇರು ವಹಿವಾಟಿನಲ್ಲಿ ಟೆಕ್ ಮಹೀಂದ್ರಾ, ಐಟಿಸಿ ಮತ್ತು ಮಹೀಂದ್ರಾ ಆ್ಯಂಡ್ ಮಹೀಂದ್ರಾ ಕಂಪನಿಯ ಷೇರುಗಳು ನಷ್ಟ ಅನುಭವಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next