ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿನ ತೇಜಿಯನ್ನು ಅನುಸರಿಸಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ನಿರಂತರ ಎರಡನೇ ದಿನವಾಗಿ ಇಂದು ಮಂಗಳವಾರ ಹೊಸ ದಾಖಲೆಯ ಎತ್ತರವನ್ನು ತಲುಪುವ ಸಾಧನೆ ಮಾಡಿದೆ.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು ಇದೇ ಮೊದಲ ಬಾರಿಗೆ 11,700 ಅಂಕಗಳನ್ನು ದಾಟಿ ಸಾರ್ವಕಾಲಿಕ ದಾಖಲೆಯ ಎತ್ತರದ 11,738.50 ಅಂಕಗಳ ಮಟ್ಟವನ್ನು ತಲುಪಿದೆ.
ಸೆನ್ಸೆಕ್ಸ್ ಇಂದಿನ ವಹಿವಾಟನ್ನು 202.52 ಅಂಕಗಳ ಏರಿಕೆಯೊಂದಿಗೆ 38,896.63 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದರೆ ನಿಫ್ಟಿ 46.55 ಅಂಕಗಳ ಏರಿಕೆಯೊಂದಿಗೆ 11,738.50 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದಿನ ವಹಿವಾಟಿನಲ್ಲಿ ರಿಲಯನ್ಸ್ ಇಂಡಸ್ಟ್ರೀಸ್, ಎಚ್ ಡಿ ಎಫ್ ಸಿ, ಎಚ್ ಡಿ ಎಫ್ ಸಿ ಬ್ಯಾಂಕ್ ಮತ್ತು ಮಾರುತಿ ಸುಜುಕಿ ಶೇರುಗಳು ಉತ್ತಮ ಖರೀದಿಯನ್ನು ಕಂಡವು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,870 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 1,188 ಶೇರುಗಳು ಮುನ್ನಡೆ ಸಾಧಿಸಿದವು; 1,508 ಶೇರುಗಳು ಹಿನ್ನಡೆಗೆ ಗುರಿಯಾದವು; 174 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.