ಮುಂಬಯಿ : ಗುಜರಾತ್ ಚುನಾವಣೆಯ ಅಂತಿಮ ಹಂತದ ಮತದಾನ ಈಗ ಜಾರಿಯಲ್ಲಿದ್ದು ಇಂದು ಸಂಜೆಯ ಬಳಿಕ ಜನಮತ ಅಭಿಪ್ರಾಯ ಬಹಿರಂಗವಾಗುವುದಕ್ಕೆ ಮುನ್ನವೇ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 117 ಅಂಕಗಳ ಜಂಪ್ ದಾಖಲಿಸಿತು.
ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ತೋರಿ ಬಂದಿರುವುದು ಹಾಗೂ ಡಾಲರ್ ಎದುರು ರೂಪಾಯಿ 16 ಪೈಸೆ ಬಲಗೊಂಡಿರುವುದು ಮುಂಬಯಿ ಶೇರು ಪೇಟೆಗೆ ಉತ್ತೇಜನ ನೀಡಿತು.
ಕಳೆದ ಎರಡು ದಿನಗಳ ನಿರಂತರ ವಹಿವಾಟಿನಲ್ಲಿ ಸೆನ್ಸೆಕ್ಸ್ 402 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು.
ಇಂದು ಬೆಳಗ್ಗೆ 10.40ರ ಹೊತ್ತಿಗೆ ಸೆನ್ಸೆಕ್ಸ್ 50.84 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 33,103.88 ಅಂಕಗಳ ಮಟ್ಟದಲ್ಲೂ , ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಕ 17.30 ಅಂಕಗಳ ಏರಿಕೆಯನ್ನು ಕಾಯ್ದುಕೊಂಡು 10,210.30 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಟಿಸಿಎಸ್, ಮಾರುತಿ ಸುಜುಕಿ, ರಿಲಯನ್ಸ್, ಇಂಡಸ್ ಇಂಡ್ ಬ್ಯಾಂಕ್ ಶೇರುಗಳು ಇಂದು ಬೆಳಗ್ಗಿನ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.