ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 123 ಅಂಕಗಳ ಉತ್ತಮ ಮುನ್ನಡೆಯೊಂದಿಗೆ ನವೆಂಬರ್ ತಿಂಗಳ F&O ವಾಯಿದೆ ವಹಿವಾಟನ್ನು ಭರ್ಜರಿಯಾಗಿ ಆರಂಭಿಸಿದೆ. ಅಂತೆಯೇ ಸೆನ್ಸೆಕ್ಸ್ ಮತ್ತು ನಿಫ್ಟಿ ಹೊಸ ದಾಖಲೆಯ ಎತ್ತರವನ್ನು ಏರಿರುವ ಸಾಧನೆಯನ್ನು ಮಾಡಿವೆ
ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್ 77.77 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡ 33,224.90 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 5.50 ಅಂಕಗಳ ಮುನ್ನಡೆಯೊಂದಿಗೆ 10,349.30 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಎಸ್ ಬ್ಯಾಂಕ್, ಎಸ್‌ಬಿಐ, ಐಸಿಐಸಿಐ, ಮಾರುತಿ ಸುಜುಕಿ, ಬಿಪಿಸಿಎಲ್ ಶೇರುಗಳು ಇಂದು ಬೆಳಗ್ಗಿನ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್‌ಗಳು : ಅದಾನಿ ಪೋರ್ಟ್ಸ್, ಬಜಾಜ್ ಫೈನಾನ್ಸ್, ಕೋಟಕ್ ಮಹೀಂದ್ರ, ಅರಬಿಂದೋ ಫಾರ್ಮಾ, ಸಿಪ್ಲಾ.
ಟಾಪ್ ಲೂಸರ್‌ಗಳು : ಎಸ್ ಬ್ಯಾಂಕ್, ಭಾರ್ತಿ ಇನ್‌ಫ್ರಾ ಟೆಲ್, ಎಚ್‌ಪಿಸಿಎಲ್, ಭಾರ್ತಿ ಏರ್‌ಟೆಲ್, ಐಡಿಯಾ ಸೆಲ್ಯುಲರ್.