Advertisement
ಮೈಸೂರು ಮಹಾರಾಜರಿಗೆ ಸೇರಿದ ಖಾಸಗಿ ಆಸ್ತಿ ಯನ್ನು ಕಬಳಿಸಲು ಹಾಗೂ ಕಳ್ಳತನದಿಂದ ಗಣಿಗಾರಿಕೆ ನಡೆಸುತ್ತಿರುವ ವ್ಯಕ್ತಿಗಳಿಗೆ ಅಧಿಕಾರ ದುರುಪಯೋಗ ಪಡಿಸಿಕೊಂಡು ನೆರವಾಗುತ್ತಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ಟಿಐ ಕಾರ್ಯಕರ್ತಕೆ.ಆರ್.ರವೀಂದ್ರ ರಾಜ್ಯಪಾಲರಿಗೆ 2017ರ ಸೆ.18ರಂದು ದೂರು ನೀಡಿದ್ದರು. ರಾಜ್ಯಪಾಲರ ನಿರ್ದೇಶನದಂತೆ ಸರ್ಕಾರದ ಅಧೀನ ಕಾರ್ಯದರ್ಶಿ ರಾಜಮ್ಮ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು 2018ರ ಜನವರಿ 23ರಂದು ಲೋಕಾಯುಕ್ತ ಸಂಸ್ಥೆಯ ತನಿಖೆಗೆ ಒಪ್ಪಿಸಿದ್ದಾರೆ.
ಗಣಿಗಾರಿಕೆಗೆ ಕುಮ್ಮಕ್ಕು ನೀಡಿದ್ದಾರೆ. ಪ್ರತಿಪಕ್ಷ ನಾಯಕರಾಗಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದರೆಂಬ ಆರೋಪ ಕೇಳಿಬಂದಿತ್ತು. ಇಲ್ಲಿನ ಕಲ್ಲು ಗಣಿ ಸಂಪತ್ತನ್ನು ನೋಡಿದ್ದ ಸಿಎಂ ಸಿದ್ದರಾಮಯ್ಯ ಅವರು 2014ರ ಫೆ.24ರಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಂಡ್ಯ ಜಿಲ್ಲಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ, ಮೈಸೂರಿನ ಪ್ರಾದೇಶಿಕ ಆಯುಕ್ತರು, ಗಣಿ, ಲೋಕೋಪಯೋಗಿ ಇಲಾಖೆ ಸೇರಿ ಹಲವು ಅಧಿಕಾರಿಗಳ ಸಭೆ ನಡೆಸಿ ಕಲ್ಲುಪುಡಿ ಘಟಕಗಳಿಗೆ ಅಗತ್ಯವಿರುವ ಕಚ್ಚಾ ಮಾಲಿನ ಸಮಸ್ಯೆ ಬಗೆಹರಿಸಲು
ನಿರ್ದೇಶನ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಮೈಸೂರು ಮಹಾರಾಜರ ಖಾಸಗಿ ಸ್ವತ್ತಿನಲ್ಲಿ ಗಣಿಗಾರಿಕೆ ನಡೆಸಲು ಸಿದ್ದರಾಮಯ್ಯ ಅವರೇ ಅಧಿಕಾರಿಗಳ ಮೇಲೆ ಒತ್ತಡ ತಂದಿರುವುದು ಮಂಡ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೈಸೂರು
ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಬರೆದಿರುವ ಪತ್ರವೇ ಸಾಕ್ಷಿ ಎಂದು ರವೀಂದ್ರ ಆರೋಪಿಸಿದ್ದರು.