ನವದೆಹಲಿ: ಇಲ್ಲಿನ ಮೌಜ್ ಪುರ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ಬಿಜೆಪಿ ನಡೆಸುತ್ತಿದ್ದ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲುತೂರಾಟ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿರುವ ಘಟನೆ ವರದಿಯಾಗಿದೆ.
ಈ ಪ್ರದೇಶ ಜಾಫರಾಬಾದ್ ಗೆ ಸಮೀಪದಲ್ಲಿದ್ದು ಇಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿತ್ತು. ಹೀಗಾಗಿ ಸಿಎಎ ಪರ ಮತ್ತ ವಿರೋಧಿ ಪ್ರತಿಭಟನಾಕಾರರ ನಡುವೆ ಈ ಘರ್ಷಣೆ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ.
ಪ್ರತಿಭಟನಾ ಸಂದರ್ಭದಲ್ಲಿ ಪ್ರತಿಭಟನಾಕಾರರ ಸಂಖ್ಯೆಗಿಂತ ಪೊಲೀಸರ ಸಂಖ್ಯೆ ಕಡಿಮೆ ಇದ್ದುದರಿಂದ ಕಲ್ಲುತೂರಾಟ ಘಟನೆಯ ಸಂದರ್ಭದಲ್ಲಿ ಕಲ್ಲುತೂರಾಟಗಾರರನ್ನು ನಿಯಂತ್ರಿಸಲು ಪೊಲೀಸರಿಗೆ ಸಾಧ್ಯವಾಗಲಿಲ್ಲ ಎನ್ನಲಾಗಿದೆ.
ಬಳಿಕ ಜಾಫರಾಬಾದ್ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಪ್ರಕ್ಷುಬ್ಧವಾಗಿರುವ ಮೌಜ್ ಪುರ ಪ್ರದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅರೆ ಸೇನಾಪಡೆಗಳನ್ನು ನಿಯೋಜಿಸಲಾಗಿದೆ.