Advertisement

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

10:53 AM Apr 19, 2024 | Team Udayavani |

ಪಶ್ಚಿಮ ಬಂಗಾಳ: 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 102 ಕ್ಷೇತ್ರಗಳಿಗೆ ಇಂದು (ಶುಕ್ರವಾರ) ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದು ಈ ನಡುವೆ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ನಡೆದ ವರದಿಯಾಗಿದೆ.

Advertisement

ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನಲ್ಲಿ ಬೆಳಿಗ್ಗೆ ಮತದಾನ ಪ್ರಕ್ರಿಯೆ ನಡೆದ ಕೆಲ ಹೊತ್ತಿನಲ್ಲೇ ಹಿಂಸಾಚಾರ ಭುಗಿಲೆದ್ದಿದ್ದು, ಚಂದಮಾರಿಯ ಮತಗಟ್ಟೆಯೊಂದರ ಬಳಿ ಕಲ್ಲು ತೂರಾಟದ ವರದಿಗಳು ಹೊರಹೊಮ್ಮಿವೆ. ಈ ವೇಳೆ ಬಿಜೆಪಿ ಬೂತ್ ಅಧ್ಯಕ್ಷರು ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಂದ್ಮಾರಿ ಪ್ರದೇಶದಲ್ಲಿ ಚುನಾವಣೆ ವೇಳೆ ಹಿಂಸಾಚಾರ ಹೊಸದೇನಲ್ಲ. ಈ ಪ್ರದೇಶ ಯಾವಾಗಲೂ ಸೂಕ್ಷ್ಮಪ್ರದೇಶವಾಗಿದ್ದು ಈ ಬಾರಿಯೂ ಮತದಾನದ ದಿನವೇ ಕಲ್ಲು ತೂರಾಟ ನಡೆದಿರುವುದು ಭದ್ರತಾ ವ್ಯವಸ್ಥೆ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಎಬ್ಬಿಸಿದೆ.

ಕಲ್ಲು ತೂರಾಟ ಹೇಗೆ ಆರಂಭವಾಯಿತು ಮತ್ತು ಇದರಲ್ಲಿ ಭಾಗಿಯಾದವರು ಯಾರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಚುನಾವಣಾ ಆಯೋಗ ಕೂಡ ಈ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಭದ್ರತಾ ಪಡೆಗಳಿಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ. ಮತದಾನ ಶಾಂತಿಯುತವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರತಿಯೊಬ್ಬ ಮತದಾರರು ಯಾವುದೇ ಭಯವಿಲ್ಲದೆ ತಮ್ಮ ಹಕ್ಕು ಚಲಾಯಿಸಲು ಅವಕಾಶ ಮಾಡಿಕೊಡುವುದಾಗಿ ಆಯೋಗ ಹೇಳಿದೆ.

Advertisement

ಇದನ್ನೂ ಓದಿ: Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Advertisement

Udayavani is now on Telegram. Click here to join our channel and stay updated with the latest news.