ಉತ್ತರ ಪ್ರದೇಶ: ವಂದೇ ಭಾರತ್ ರೈಲಿಗೆ ಕಿಡಿಗೇಡಿಗಳಿಂದ ಮತ್ತೆ ಕಲ್ಲು ತೂರಾಟ ನಡೆದಿದ್ದು, ಘಟನೆಯಿಂದ ಕೋಚ್‌ನ ಗಾಜು ಒಡೆದಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ.
ರೈಲು ಗೋರಖ್‌ಪುರದಿಂದ ಲಖನೌಗೆ ತೆರಳುತ್ತಿತ್ತು ಎನ್ನಲಾಗಿದ್ದು. ಬಾರಾಬಂಕಿಯ ಸಫೇದಾಬಾದ್ ರೈಲು ನಿಲ್ದಾಣದ ಬಳಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು ರೈಲ್ವೇ ನಿಲ್ದಾಣಗಳ ಸೌಂದರ್ಯೀಕರಣದ ವರ್ಚುವಲ್ ಕಾರ್ಯಕ್ರಮ ನಡೆಯುತ್ತಿರುವ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಘಟನೆಯ ಬಗ್ಗೆ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಬೆಂಗಾವಲು ತಂಡ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದೆ. ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಆರ್‌ಎಫ್‌ಪಿ ಇನ್ಸ್‌ಪೆಕ್ಟರ್ ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ಸರ್ಕಾರಿ ಆಸ್ತಿ ಹಾನಿ ಮಾಡಿದ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಮಾಡುವ ಮೂಲಕ ಪ್ರಯಾಣಿಕರ ಜೀವಕ್ಕೆ ಅಪಾಯ ತಂದಿರುವ ಬಗ್ಗೆ ಸಂಬಂಧಪಟ್ಟ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇದನ್ನು ಓದಿ: Chandrayaan-3: ಚಂದ್ರನ ಸನಿಹಕ್ಕೆ ಇಸ್ರೋ ನೌಕೆ… ಸೆರೆ ಹಿಡಿದ ಮೊದಲ ಚಿತ್ರ ಬಿಡುಗಡೆ