Advertisement

ಕೇರಳ ಸಾರಿಗೆ ಸಂಸ್ಥೆಗೆ  ಸೇರಿದ ಎರಡು ಬಸ್‌ಗಳಿಗೆ ಕಲ್ಲೆಸೆದು ಹಾನಿ

01:40 PM Feb 25, 2017 | Team Udayavani |

ಉಳ್ಳಾಲ: ತಲಪಾಡಿ ಗಡಿ ಭಾಗದಲ್ಲಿ ಕೇರಳ ಸಾರಿಗೆ ಸಂಸ್ಥೆಗೆ ಸೇರಿದ ಎರಡು ಬಸ್‌ಗಳಿಗೆ ದುಷ್ಕರ್ಮಿಗಳು ಶುಕ್ರವಾರ ತಡರಾತ್ರಿ ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಡೆದಿದ್ದು, ಘಟನೆಯ ಬಳಿಕ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

Advertisement

ಶನಿವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಮಂಗಳೂರಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಹರತಾಳಕ್ಕೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ  ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದರು. 

ತಲಪಾಡಿ ಬಳಿ ಬಸ್‌ಗೆ ಕಲ್ಲು ಎಸೆದಿದ್ದಾರೆ ಎನ್ನುವ ಮಾಹಿತಿ ಬಂದಿದೆ ಎಂದು ಸ್ಥಳೀಯ ಪೊಲೀಸ್‌ ಮೂಲಗಳು ತಿಳಿಸಿವೆ. 

ಬೀರಿಯಲ್ಲೂ ಕಲ್ಲೆಸೆತ?
ತಲಪಾಡಿ ಘಟನೆಯ ಅನಂತರ ಇನ್ನೊಂದು ಪ್ರಕರಣದಲ್ಲಿ ಕೋಟೆಕಾರು ಬೀರಿ ಬಳಿ ಕೇರಳ ರಸ್ತೆ ಸಾರಿಗೆಗೆ ಸೇರಿದ ಬಸ್‌ಗೆ ಕಲ್ಲೆಸೆದಿದ್ದಾರೆ ಎನ್ನುವ ಮಾಹಿತಿ ಬಂದಿದ್ದು ಪೊಲೀಸರು ಇದನ್ನು ದೃಢಪಡಿಸಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next