Advertisement

Gaza: ಗಾಜಾದಲ್ಲಿ ದಾಳಿ ನಿಲ್ಲಿಸಿ: ಸೌದಿ ದೊರೆ

11:14 PM Oct 20, 2023 | Team Udayavani |

ರಿಯಾದ್‌: ಗಾಜಾ ಪಟ್ಟಿಯಲ್ಲಿ ಇಸ್ರೇಲ್‌ ನಡೆಸುತ್ತಿರುವ ಸೇನಾ ಕಾರ್ಯಾಚರಣೆಯನ್ನು ತಕ್ಷಣ ನಿಲ್ಲಿಸಬೇಕು ಎಂದು ಸೌದಿ ದೊರೆ ಮೊಹಮ್ಮದ್‌ ಬಿನ್‌ ಸಲ್ಮಾನ್‌ ಆಗ್ರಹಿಸಿದರು. ರಿಯಾದ್‌ನಲ್ಲಿ ನಡೆದ ಗಲ್ಫ್ ಮತ್ತು ಆಗ್ನೇಯ ಏಷ್ಯಾ ರಾಷ್ಟ್ರಗಳ ಸಮಾವೇಶದಲ್ಲಿ ಮಾತನಾಡಿದ ಅವರು, “ಗಾಜಾದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ತೀವ್ರ ದುಃಖವಾಗಿದೆ. ಘರ್ಷಣೆಯಲ್ಲಿ ಅಮಾಯಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಮಿಲಿಟರಿ ಕಾರ್ಯಾಚರಣೆಯನ್ನು ಇಸ್ರೇಲ್‌ ಕೂಡಲೇ ನಿಲ್ಲಿಸಬೇಕು. ಶಾಶ್ವತ ಶಾಂತಿ ಸಾಧಿಸುವ ನಿಟ್ಟಿನಲ್ಲಿ ಪ್ರತ್ಯೇಕ ಪ್ಯಾಲೆಸ್ತೀನ್‌ ರಾಷ್ಟ್ರ ಸ್ಥಾಪನೆಯಾಗಬೇಕು’ ಎಂದು ಒತ್ತಾಯಿಸಿದರು.

Advertisement

“ಯಾವುದೇ ಸಂದರ್ಭದಲ್ಲಿ ಹಾಗೂ ಯಾವುದೇ ರೀತಿಯಲ್ಲೂ ನಾಗರಿಕರನ್ನು ಗುರಿಯಾಗಿ ನಡೆಸುವ ದಾಳಿಗಳನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ’ ಎಂದು ಮೊಹಮ್ಮದ್‌ ಬಿನ್‌ ಸಲ್ಮಾನ್‌ ಪ್ರತಿಪಾದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next