Advertisement

ಭ್ರೂಣ ಹತ್ಯೆ ನಿಲ್ಲಲಿ: ದೇವರಾಜಮ್ಮ

04:01 PM Dec 03, 2019 | Suhan S |

ಮಾಗಡಿ: ಪೋಷಕರೇ ಭ್ರೂಣ ಹತ್ಯೆ ಮಾಡದೇ ಹುಟ್ಟುವ ಮಗು ಗಂಡಾಗಲಿ, ಹೆಣ್ಣಾಗಲಿ ಇಬ್ಬರು ಸಮಾಜದ ಕಣ್ಣು ಗಳು ಎಂದು ಭಾವಿಸಿ ಎಂದು ತಗ್ಗೀ ಕುಪ್ಪೆ ಗ್ರಾಪಂ ಅಧ್ಯಕ್ಷೆ ದೇವರಾಜಮ್ಮ ಸಲಹೆ ನೀಡಿದರು.

Advertisement

ತಾಲೂಕಿನ ತಗ್ಗೀಕುಪ್ಪೆ ಗ್ರಾಮ ಪಂಚಾಯ್ತಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಿಂಗ ತಾರತಮ್ಯ ದಿಂದಾಗಿ ಹಣ್ಣು ಮಕ್ಕಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ಇದರಿಂದ ಸಮಾಜದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಮಾಜದಲ್ಲಿ ಹೆಣ್ಣು ಮತ್ತು ಗಂಡು ಸರಿ ಸಮಾನರು. ಹೆಣ್ಣು ಮತ್ತು ಗಂಡು ಎಲ್ಲಾ ಕ್ಷೇತ್ರದಲ್ಲಿ ಸರಿಸಮನಾಗಿ ದುಡಿಯುತ್ತಾ ಸಮಾಜಕ್ಕೆ ತಮ್ಮದೇ ಆದರೀತಿಯಲ್ಲಿ ಕೊಡುಗೆ ನೀಡುತ್ತಾ ಬರುತ್ತಿದ್ದಾರೆ. ಮಹಿಳೆಯರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಅತ್ಯಾಚಾರದಂತ ಕ್ರೌರ್ಯಗಳು ನಿಲ್ಲಬೇಕು. ಇದಕ್ಕಾಗಿ ಮಹಿಳೆಯರು ಮತ್ತು ಮಕ್ಕಳು ಸುಕ್ಷಿತರಗಾಗಿ ಸಮಾಜಕ್ಕೆ ಬೆಳಕಾಗಬೇಕಿದೆ. ಶಿಕ್ಷಕರು ಮಕ್ಕಳನ್ನುಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕಿದೆ. ಪಂಚಾಯ್ತಿಯಿಂದ ಶಾಲೆಗೆ ಅಗತ್ಯ ಮೂಲ ಸೌಕರ್ಯ ಒದಗಿಸಿಕೊಡಲು ಬದ್ಧರಾಗಿದ್ದೇವೆ. ಸೌಲತ್ತುಗಳನ್ನು ಸಮರ್ಪಕವಾಗಿ ಪಡೆದುಕೊಳ್ಳಬೇಕು. ಎಂದು ತಿಳಿಸಿದರು.

ರೇಷ್ಮೆ ಇಲಾಖೆಯ ಸುಲ್ತಾನ್‌ ಬಾಬಾಪಿಡಿಓ ನಾಗರಾಜು, ಸದಸ್ಯರಾದಮಹಂತೇಶಯ್ಯ, ಹುಚ್ಚಮ್ಮ, ಪಶು ವೈದ್ಯರು, ಆಶಾ ಕಾರ್ಯಕರ್ತೆಯರು, ಮುಖ್ಯ ಸಹ ಶಿಕ್ಷಕರು ಹಾಗೂ ಶಾಲಾ ಮಕ್ಕಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next