Advertisement
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ನಿಲ್ಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಕ್ರಮ ಗಣಿಗಾರಿಕೆ ತಕ್ಷಣ ನಿಲ್ಲಿಸಬೇಕು. ಅರ್ಜಿ ಹಾಕಿ ನಂತರ ಪರವಾನಗಿ ಪಡೆಯಬೇಕು ಎಂದರು.
Related Articles
Advertisement
ಅಭಿವೃದ್ಧಿ ಕಾರ್ಯಗಳಿಗೆ ಜೆಲ್ಲಿ ಬೇಕು. ಆದರೆ, ಅಕ್ರಮ ಗಣಿಗಾರಿಕೆ ನಿಲ್ಲಬೇಕು. ಭೋವಿ ವಡ್ಡರ ಸಮಾಜದವರು ಕಲ್ಲು ಒಡೆಯುತ್ತಾರೆ. ಇದರಿಂದ ಯಾವುದೇ ಅನಾಹುತ ಸಂಭವಿಸುವುದಿಲ್ಲ. ಅಭಿವೃದ್ಧಿಗಳಿಗೆ ಕೊರತೆ ಆಗಬಾರದು ಎಂದು ಸಿಎಂ ಹೇಳಿದರು.
ಕೆಪಿಎಸ್ ಸಿ ಪೇಪರ್ ಲೀಕ್ ಆಗಿದೆ. ಪರೀಕ್ಷೆ ಮುನ್ನವೇ ಪೇಪರ್ ಲೀಕ್ ಔಟ್ ಆಗಿರುವುದು ಅಕ್ಷಮ್ಯ ಅಪರಾಧ. ಈ ಬಗ್ಗೆ ನಿನ್ನೆ ರಾತ್ರಿಯೇ ಮಾಹಿತಿ ಪಡೆದಿದ್ದೇನೆ. ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ತಪ್ಪಿತಸ್ಥ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲು ಸೂಚಿಸಿದ್ದೇನೆ. ಅಗತ್ಯ ಬಿದ್ದರೆ ಹುದ್ದೆಯಿಂದ ವಜಾಗೊಳಿಸಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಕೋವಿಡ್ ಹಿನ್ನೆಲೆ: ಬಜೆಟ್ ಗಾತ್ರ ತಗ್ಗಿಸುವುದು ಅನಿವಾರ್ಯ: ಸಿಎಂ
ರೈತರ ಹೋರಾಟಕ್ಕೆ ವಿರೋಧವಿಲ್ಲ: ಜ. 26 ಕ್ಕೆ ಹಮ್ಮಿಕೊಳ್ಳಲಾಗಿರುವ ರೈತರ ಹೋರಾಟದ ಬಗ್ಗೆ ಮಾತನಾಡಿದ ಸಿಎಂ, ರೈತರ ಹೋರಾಟಕ್ಕೆ ನನ್ನ ವಿರೋಧವಿಲ್ಲ. ಸರ್ಕಾರ ರೈತರ ಪರ ಇದೆ. ರೈತರು ಶಾಂತ ರೀತಿಯಿಂದ ಪ್ರತಿಭಟನೆ ಮಾಡಬೇಕು ಎಂದು ಮನವಿ ಮಾಡಿದರು.
ಹುಣಸೋಡು ಬ್ಲಾಸ್ಟ್ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಪ್ರಕರಣದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟ ಕುಟುಂಬಗಳಿಗೆ ಐದು ಲಕ್ಷ ಪರಿಹಾರ ನೀಡಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದೆ. ತನಿಖೆ ಬಳಿಕ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ ಎಂದರು.