Advertisement

ಬ್ರಿಗೇಡ್‌ ಬಿಟ್ಬಿಡಿ,ಬಹಿರಂಗ ಹೇಳಿಕೆ ನೀಡ್ಬೇಡಿ:BJP ವರಿಷ್ಠರ ತಾಕೀತು

12:46 PM Apr 30, 2017 | |

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಿ.ಎಸ್‌.ಯಡಿಯೂರಪ್ಪ ಮತ್ತು ಕೆ.ಎಸ್‌.ಈಶ್ವರಪ್ಪ ನಡುವಿನ ಭಿನ್ನಮತಕ್ಕೆ ತಾರ್ಕಿಕ ಅಂತ್ಯ ಹಾಡಿ ಪಕ್ಷವನ್ನು ಸಂಘಟಿಸಿಲು ಹಲವು ಕ್ರಮ ಕೈಗೊಳ್ಳಲು ಬಿಜೆಪಿ ವರಿಷ್ಠರು  ಮುಂದಾಗಿದ್ದಾರೆ. 

Advertisement

ಈಶ್ವರಪ್ಪ ಅವರು ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಸಂಘಟನೆ ಮಾಡಬಾರದು ಎಂದು ವರಿಷ್ಠರು ನಿರ್ದೇಶನ ನೀಡಿರುವುದಾಗಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ್‌ ಲಿಂಬಾವಳಿ ಭಾನುವಾರ ಹೇಳಿದ್ದಾರೆ. 

ರಾಜ್ಯ ಉಸ್ತುವಾರಿ ಮುರಳೀಧರ್‌ ರಾವ್‌ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಪಕ್ಷದ ಶಿಸ್ತನ್ನು ಎಲ್ಲರೂ ಪಾಲಿಸಬೇಕು . ಆಂತರಿಕ ವಿಚಾರವನ್ನು ಹೊರಗೆ ಮಾತನಾಡಬಾರದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು. 

ಈಶ್ವರಪ್ಪ, ಅರವಿಂದ್‌ ಲಿಂಬಾವಳಿಯಾಗಲಿ, ಆರ್‌.ಅಶೋಕ್‌ ಆಗಲಿ  ಎಷ್ಟೇ ದೊಡ್ಡ ನಾಯಕರಾಗಲಿ ಪಕ್ಷದ ಶಿಸ್ತು ಎಲ್ಲರಿಗೂ ಅನ್ವಯವಾಗುತ್ತದೆ ಎನ್ನುವುದು ಕೇಂದ್ರದ ನಿರ್ದೇಶನವಾಗಿದೆ ಎಂದರು. 

ಶಿಸ್ತು ಕ್ರಮದ ಪ್ರಶ್ನೆಯೇ ಇಲ್ಲ

Advertisement

ಮೈಸೂರಿನಲ್ಲಿ ಮಾತನಾಡಿದ ಈಶ್ವರಪ್ಪ ಅವರು ನನ್ನ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಪ್ರಶ್ನೆಯೇ ಇಲಲ. 3 ಬಾರಿ ರಾಜ್ಯಾಧ್ಯಕ್ಷನಾಗಿ ನಾನು ಪಕ್ಷ ಸಂಘಟನೆ ಮಾಡಿದ್ದೇನೆ.  ಯಡಿಯೂರಪ್ಪ ಕೆಜೆಪಿ ಕಟ್ಟಿದಾಗ ನಾನು ಪಕ್ಷ ಮುನ್ನೆಡೆಸಿದ್ದೇನೆ. ಪಕ್ಷಕ್ಕೆ ನನ್ನ ಕೊಡುಗೆ ಏನೆಂದು ಎಲ್ಲರಿಗೂ ಗೊತ್ತಿದೆ. ಯಾರೋ ಶಿಸ್ತು ಕ್ರಮ ಕೈಗೊಳ್ಳುತ್ತಾರೆ ಎನ್ನುವ ಸುದ್ದಿಯನ್ನು ಹುಟ್ಟು ಹಾಕುತ್ತಿದ್ದಾರೆ ಎಂದರು. 

2 ದಿನಗಳ ಒಳಗೆ ಬಿಎಸ್‌ವೈ ಮತ್ತು ಈಶ್ವರಪ್ಪ ಅವರನ್ನು ದೆಹಲಿಗೆ ಕರೆಸಿಕೊಂಡು  ವರಿಷ್ಠರು ಮಾತುಕತೆ ಮಾತಕತೆ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. 

Advertisement

Udayavani is now on Telegram. Click here to join our channel and stay updated with the latest news.

Next