Advertisement

ನೈಸರ್ಗಿಕ ಸಂಪನ್ಮೂಲಗಳ ಶೋಷಣೆ ನಿಲ್ಲಿಸಿ

04:31 PM Mar 23, 2022 | Team Udayavani |

ಬ್ಯಾಡಗಿ: ನೈಸರ್ಗಿಕ ಸಂಪನ್ಮೂಲಗಳ ಶೋಷಣೆ ನಿಲ್ಲಿಸಬೇಕು. ಇಲ್ಲದಿದ್ದರೆ ವ್ಯಕ್ತಿಯ ಜೀವನ ನೀರಿನ ಕೊರತೆಯಂತಹ ಕೆಲವು ಪ್ರಶ್ನಾರ್ಥಕ ವಿಷಯಕ್ಕೆ ಕೊನೆಗೊಳ್ಳುವ ಸಾಧ್ಯತೆಯಿದೆ ಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಎಸ್‌.ಟಿ. ಸತೀಶ ಆತಂಕ ವ್ಯಕ್ತಪಡಿಸಿದರು.

Advertisement

ಪಟ್ಟಣದ ಅಗ್ನಿಶಾಮಕ ಠಾಣೆ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ನ್ಯಾಯವಾದಿಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಎಸ್‌.ಎಂ. ಧನುರಾಜ್‌ ಮಾತನಾಡಿ, “ನೀರು ಜೀವನ’ ಎಂಬ ಗಾದೆ ಮಾತು ಅಕ್ಷರಶಃ ಸತ್ಯವಾಗಿದೆ. ಎಲ್ಲ ಜೀವಂತ ಪ್ರಾಣಿ ಮತ್ತು ಸಸ್ಯಗಳು ನೀರಿಲ್ಲದೇ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ. ಆದರೆ ಅಂತರ್ಜಲವನ್ನು ಕಾಪಾಡಿಕೊಳ್ಳುವ ಅಥವಾ ಜನಸಂಖ್ಯೆಗೆ ಅನುಗುಣವಾಗಿ ಅದನ್ನು ವೃದ್ಧಿಸುವ ಗುರುತರ ಜವಾಬ್ದಾರಿ ಸರ್ಕಾರ ಸೇರಿದಂತೆ ಸಾರ್ವಜನಿಕರ ಮೇಲಿದೆ ಎಂದರು.

ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎನ್‌.ಎಸ್‌. ಬಟ್ಟಲಕಟ್ಟಿ, ಮುಖ್ಯಾಧಿಕಾರಿ ಏಸು ಬೆಂಗಳೂರು, ಸರ್ಕಾರಿ ಅಭಿಯೋಜಕ ರಾಜಣ್ಣ ನ್ಯಾಮತಿ, ಸಹಾಯಕ ಸರ್ಕಾರಿ ವಕೀಲ ಕುಮಾರೇಶ ಎಳೆಹೊಳೆ, ಆರ್‌ಎಫ್‌ಒ ಮಹೇಶ ಮರೆಣ್ಣನವರ, ಅಗ್ನಿಶಾಮಕ ಅಧಿಕಾರಿ ಸೋಮಶೇಖರ ಅಗಡಿ, ನ್ಯಾಯವಾದಿಗಳಾದ ಎಸ್‌.ಎಚ್‌. ಗುಂಡಪ್ಪನವರ, ಸುರೇಶ ಕಾಟೇನಹಳ್ಳಿ ಹಾಗೂ ಇನ್ನಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next