Advertisement
ಬೃಹತ್ ಜಾಗೃತಿ ಜಾಥಾ: ವಿಶ್ವ ತಂಬಾಕು ರಹಿತ ದಿನಾಚರಣೆ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ “ತಂಬಾಕು ಮತ್ತು ಹೃದಯ ಸಂಬಂಧಿ ಕಾಯಿಲೆಗಳು’ ಎಂಬ ಘೋಷಣೆಯೊಂದಿಗೆ ಜಾಗೃತಿ ಜಾಥಾ ನಡೆಸಲಾಯಿತು.
Related Articles
Advertisement
ಶಿಕ್ಷಣ ಸಂಸ್ಥೆಗಳಲ್ಲಿ ಅರಿವು: ವಿಶ್ವತಂಬಾಕು ರಹಿತ ದಿನದ ಅಂಗವಾಗಿ ನಗರದ ವಿವಿಧ ಶಾಲಾ ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮ ನಡೆಸಲಾಯಿತು. ನಗರದ ಬೋಗಾದಿ ಮುಖ್ಯ ರಸ್ತೆಯ ಗಂಗೋತ್ರಿ ಪಬ್ಲಿಕ್ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ತಂಬಾಕು ರಹಿತ ದಿನದ ಪ್ರಯುಕ್ತ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು, ಮೈಮ್, ನಾಟಕ, ನೃತ್ಯ ಹಾಗೂ ಭಾಷಣಗಳ ಮೂಲಕ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಿದರು. ಪ್ರಾಂಶುಪಾಲ ಎಂ.ಶ್ರೀಧರ್, ಶಾಲೆಯ ಆಡಳಿತಾಧಿಕಾರಿ ಕಾಂತಿನಾಯಕ್, ಶಾಲಾ ಮುಖ್ಯಸ್ಥರಾದ ಝರೀನಾ ಬಾಬುಲ್ ಹಾಜರಿದ್ದರು.
ನಗರದ ದಟ್ಟಗಳ್ಳಿಯಲ್ಲಿರುವ ಎಸ್‌ವಿಜಿ ವಿಶ್ವಪ್ರಜ್ಞ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ತಂಬಾಕು ರಹಿತ ದಿನದ ಅಂಗವಾಗಿ ತಂಬಾಕು ಉತ್ಪನ್ನಗಳ ವಿರುದ್ಧ ಜಾಗೃತಿ ಅಭಿಯಾನ ನಡೆಸಲಾಯಿತು. ಕಾಲೇಜಿನ ವ್ಯವಸ್ಥಾಪಕ ಟ್ರಸ್ಟಿ ವಿಶ್ವನಾಥ್ ಶೇಷಾಚಲ ಅವರು, ತಂಬಾಕು ಬೇಡ ಎಂದು ಸಹಿ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕ್ಯಾನ್ಸರ್ ತಪಾಸಣಾ ಶಿಬಿರ: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಕೆ.ಆರ್.ಆಸ್ಪತ್ರೆ ದಂತ ಚಿಕಿತ್ಸಾ ವಿಭಾಗದಿಂದ ವಿಶ್ವ ತಂಬಾಕು ರಹಿತ ದಿನದ ಪ್ರಯುಕ್ತ ಕೆ.ಆರ್.ಆಸ್ಪತ್ರೆ ದಂತ ಚಿಕಿತ್ಸೆ ವಿಭಾಗದಲ್ಲಿ ಬಾಯಿ ಕ್ಯಾನ್ಸರ್‌ನ ಉಚಿತ ತಪಾಸಣೆ ಶಿಬಿರ ನಡೆಸಲಾಯಿತು.
ಅಂತೆಯೇ ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ತಂಬಾಕು ಮುಕ್ತ ದಿನಾಚರಣೆ ಪ್ರಯುಕ್ತ ಹೃದಯ ಕ್ಷಕಿರಣ (ಎಕ್ಸ್‌ರೇ) ಮತ್ತು ಪಲ್ಮನರಿ ಫಂಕ್ಷನ್ ಟೆಸ್ಟ್ ಪಿಎಫ್ಟಿ) ಜತೆಗೆ ತಜ್ಞ ವೈದ್ಯರಿಂದ ಚಿಕಿತ್ಸಾ ಸಲಹೆಗಳನ್ನು ನೀಡಲಾಯಿತು.