Advertisement

ಕಾಲಹರಣ ಮಾಡುವುದು ಬಿಡಿ, ಉದ್ಯೋಗ ಸೃಷ್ಟಿಸಿ

07:30 AM Oct 05, 2017 | |

ಅಮೇಠಿ: “”ಅನಗತ್ಯವಾಗಿ ಕಾಲಹರಣ ಮಾಡದೇ ದೇಶದಲ್ಲಿ ಉದ್ಯೋಗ ಸೃಷ್ಟಿಗೆ ಮುಂದಾಗಿ” ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.

Advertisement

ಹಲವು ನಾಟಕೀಯ ಬೆಳವಣಿಗೆಗಳ ಬಳಿಕ, ಹೆಚ್ಚು ಕಡಿಮೆ ಆರು ತಿಂಗಳ ನಂತರ ಬುಧವಾರ ಸ್ವಕ್ಷೇತ್ರ ಅಮೇಠಿಗೆ ಭೇಟಿ ನೀಡಿರುವ ರಾಹುಲ್‌ ಗಾಂಧಿ ಅವರು, “”ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗದೇ ಇದ್ದರೆ, ಅದನ್ನು ಜನತೆ ಮುಂದೆ ಹೇಳಿ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲಿ ಸಮಸ್ಯೆ ಬಗೆಹರಿಸಲಿದೆ. ರೈತರು ಹಾಗೂ ಯುವಜನತೆ, ಈ ಎರಡು ಪ್ರಮುಖ ಕ್ಷೇತ್ರಗಳ ಬಗ್ಗೆ ಮೋದಿ ಅವರು ಮಾತನಾಡುತ್ತಲೇ ಇಲ್ಲ” ಎಂದರು.

ಉತ್ತರ ಪ್ರದೇಶದ ಕಥವ್ರಾ ಹಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. “”ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಕಾಲಹರಣ ಮಾಡುವುದನ್ನು ನಿಲ್ಲಿಸಲಿ. ಯುವಜನತೆಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಮಾತು ಕೊಡಲಿ. ದೇಶದ ಯುವ ಜನತೆ, ಈ ದೇಶದಲ್ಲಿ ಕೆಲಸ ಮಾಡುವ ಸ್ಥಿತಿಯೇ ಇಲ್ಲ ಎಂದು ಆಡಿಕೊಳ್ಳುತ್ತಿದೆ. ಅವರ ಕೋಪ ಎಲ್ಲೆ ಮೀರಿದೆ. ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ” ಎಂದು ಗುಡುಗಿದರು.

Advertisement

Udayavani is now on Telegram. Click here to join our channel and stay updated with the latest news.

Next