ಪಣಜಿ: ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯನ್ನು ಸ್ಥಗಿತಗೊಳಿಸಿ, ಹಿಮಾಚಲ ಪ್ರದೇಶ ಮತ್ತು ಗುಜರಾತ್ ವಿಧಾನಸಭಾ ಚುನಾವಣೆ ಕುರಿತು ಗಮನಹರಿಸಬೇಕು ಎಂದು ಕಾಂಗ್ರೆಸ್ ಸಂಸದ, ಗೋವಾ ಮಾಜಿ ಸಿಎಂ ಫ್ರಾನ್ಸಿಸ್ಕೋ ಸರ್ಡಿನ್ಹಾ ಸಲಹೆ ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಹುಬ್ಬಳ್ಳಿ-ಧಾರವಾಡ: ಪಾದಚಾರಿ ಮಾರ್ಗ ತೆರವು , ಸ್ವಚ್ಛತೆಗೆ 30 ದಿನಗಳ ಗಡುವು
ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್ ಗೆ ತುಂಬಾ ಮುಖ್ಯವಾಗಿದೆ. ಕಾಂಗ್ರೆಸ್ ಪಕ್ಷ ತಳಮಟ್ಟದಿಂದ ಇನ್ನಷ್ಟು ಬೆಳೆಯಬೇಕು ಎಂಬುದು ನಮ್ಮ ಆಶಯವಾಗಿದೆ. ರಾಹುಲ್ ಒಳ್ಳೆ ಕೆಲಸ ಮಾಡುತ್ತಿದ್ದಾರೆ. ಆದರೆ ಇದೀಗ ರಾಹುಲ್ ಗಾಂಧಿ ಕಾಂಗ್ರೆಸ್ ಜೋಡೋ ಯಾತ್ರೆಯನ್ನು ನಿಲ್ಲಿಸಿ, ಹಿಮಾಚಲ, ಗುಜರಾತ್ ಗೆ ತೆರಳಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳಬೇಕು ಎಂದು ಫ್ರಾನ್ಸಿಸ್ಕೋ ತಿಳಿಸಿದ್ದಾರೆ.
ಕೇವಲ ಕಾಂಗ್ರೆಸ್ ಪಕ್ಷ ಮಾತ್ರ ಭಾರತೀಯ ಜನತಾ ಪಕ್ಷವನ್ನು ಪರಾಭವಗೊಳಿಸಲು ಶಕ್ತವಾಗಿದೆ ಎಂದು ಫ್ರಾನ್ಸಿಸ್ಕೋ ಹೇಳಿದರು. ನಿಗದಿಯಂತೆ ಕಾಂಗ್ರೆಸ್ ಜೋಡೋ ಯಾತ್ರೆ 150 ದಿನಗಳಲ್ಲಿ 3,570 ಕಿಲೋ ಮೀಟರ್ ದೂರ ಕ್ರಮಿಸಲಿದೆ. ಸೆಪ್ಟೆಂಬರ್ 7ರಂದು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಯಾತ್ರೆಗೆ ಚಾಲನೆ ನೀಡಿದ್ದು, ಜಮ್ಮು-ಕಾಶ್ಮೀರದಲ್ಲಿ ಕೊನೆಗೊಳ್ಳಲಿದೆ.
ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಜೋಡೋ ಯಾತ್ರೆ ನಡೆಯುತ್ತಿದ್ದು, ಈಗಾಗಲೇ ತಮಿಳುನಾಡು, ಕೇರಳ, ಕರ್ನಾಟಕ ಮತ್ತು ಆಂಧ್ರಪ್ರದೇಶ ಸೇರಿದಂತೆ ನಾಲ್ಕು ರಾಜ್ಯಗಳನ್ನು ಯಾತ್ರೆ ನಡೆದಿದೆ.