Advertisement
ಆಗ್ನೇಯ ಬಂಗಾಲ ಕೊಲ್ಲಿಯಲ್ಲಿ ಮೇ 9ರ ವೇಳೆಗೆ ಮೋಚಾ ಚಂಡಮಾರುತ ತೀವ್ರತೆ ಪಡೆಯಲಿದೆ. ರವಿವಾರದ ಅನಂತರ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಚಂಡಮಾರುತ ಕೇಂದ್ರ ಬಂಗಾಲ ಕೊಲ್ಲಿಯ ಉತ್ತರ ದಿಕ್ಕಿಗೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಪ್ರಧಾನ ನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರ ತಿಳಿಸಿದ್ದಾರೆ.ಒಡಿಶಾ ಕರಾವಳಿ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮೀನುಗಾರಿಕೆಯಲ್ಲಿ ತೊಡಗದಂತೆ ಮೀನುಗಾರರಿಗೆ ಎಚ್ಚರಿಕೆ ರವಾನಿಸಲಾಗಿದೆ. ಮೇ 8ರಿಂದ 12ರ ವರೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಪ್ರವಾಸೋದ್ಯಮ ಮತ್ತು ಕಡಲ ಚಟುವಟಿಕೆಗಳು ಹಾಗೂ ಹಡಗುಗಳ ಸಂಚಾರವನ್ನು ನಿಯಂತ್ರಿಸಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.