Advertisement

ಗಣೇಶ- ರಾವಣರ ಕಥೆ

03:37 PM Aug 30, 2019 | Suhan S |

ಒಂದು ಬಾರಿ ರಾವಣ ಸುದೀರ್ಘ‌ ತಪಸ್ಸಿನ ಮೂಲಕ ಪರಮೇಶ್ವರನನ್ನು ಮೆಚ್ಚಿಸಿ ಆತ್ಮಲಿಂಗವನ್ನು ನೀಡುವಂತೆ ಕೇಳಿಕೊಳ್ಳುತ್ತಾನೆ. ಆತನ ಬೇಡಿಕೆಯನ್ನು ಮನ್ನಿಸಿದ ಶಿವ, ಆತ್ಮಲಿಂಗವನ್ನು ದಾರಿ ಮಧ್ಯದಲ್ಲಿ ಎಲ್ಲಿಯೂ ಭೂಸ್ಪರ್ಷ ಮಾಡದಂತೆ ತಿಳಿಸಿ ಆತನಿಗೆ ನೀಡುತ್ತಾನೆ. ರಾವಣನಿಗೆ ಶಿವ ಆತ್ಮಲಿಂಗವನ್ನು ನೀಡಿದ ವಿಚಾರವನ್ನು ತಿಳಿದ ದೇವತೆಗಳು, ತನ ಬಲ ಹೆಚ್ಚಿ ಇನ್ನೇನು ಕೆಡುಕಾಗುವುದೋ ಎಂದು ಭಯಭೀತ ರಾಗುತ್ತಾರೆ. ಈ ಸಮಸ್ಯೆಗೆ ಮುಕ್ತಿ ಹಾಡುವಂತೆ ಶಿವ ಪುತ್ರ ಗಣೇಶನ ಮೊರೆ ಹೋಗುತ್ತಾರೆ. ದೇವತೆಗಳ ಕೂಗನ್ನಾಲಿಸಿದ ಗಣೇಶ, ಬಾಲ ಗಣಪತಿಯಾಗಿ ಅವರ ಸಮಸ್ಯೆಯನ್ನು ಪರಿಹರಿಸುವ ಭರವಸೆ ನೀಡುತ್ತಾನೆ. ಇತ್ತ ಆತ್ಮಲಿಂಗವನ್ನು ಹೊತ್ತುನಡೆದ ಮಹಾ ಬ್ರಾಹ್ಮಣ ರಾವಣನಿಗೆ ಸಂಧ್ಯಾವಂದನೆಗೆ ಸಮಯವಾಗುತ್ತದೆ.ಅದೇ ಸಮಯದಲ್ಲಿ ಬಾಲ ಗಣಪತಿ ಅದೇ ಹಾದಿಯಲ್ಲಿ ಬರುತ್ತಾನೆ. ರಾವಣನೂ ಆತ್ಮಲಿಂಗವನ್ನು ಹಿಡಿದು ನಿಲ್ಲುವುದಕ್ಕಾಗಿ ಜನರನ್ನು ಹುಡುಕು ತ್ತಿರುತ್ತಾನೆ. ಗಣಪತಿಯನ್ನು ಕಂಡ ರಾವಣ ಆತನಲ್ಲಿ ಆತ್ಮಲಿಂಗವನ್ನು ನೀಡಿ ತಾನು ಆದಷ್ಟು ಬೇಗ ಸಂಧ್ಯಾವಂದನೆ ಮುಗಿಸಿ ಬರುವುದಾಗಿ ತಿಳಿಸುತ್ತಾನೆ. ಅದಕ್ಕೊಪ್ಪಿದ ಬಾಲಕ ತಾನು ಹತ್ತು ಎಣಿಸುವುದರೊಳಗಾಗಿ ಇಲ್ಲಿರಬೇಕು ಇಲ್ಲವಾದಲ್ಲಿ ಆತ್ಮಲಿಂಗವನ್ನು ಇಲ್ಲಿಯೇ ಇಟ್ಟು ಹೋಗುವುದಾಗಿ ತಿಳಿಸುತ್ತಾನೆ. ಅದಕ್ಕೊಪ್ಪಿದ ರಾವಣ ಸಂಧ್ಯಾವಂದನೆಗೆಂದು ನೀರಿಗಿಳಿಯುತ್ತಾನೆ. ಇತ್ತ ಗಣಪತಿ ರಾವಣನಿಗೆ ಕೇಳಿಸುವಂತೆ ಸಂಖ್ಯೆಗಳನ್ನು ಎಣಿಸುತ್ತಾನೆ. ಉಪಾಯವಾಗಿ ಕೊನೆಯಲ್ಲಿ ಸಂಖ್ಯೆಯನ್ನು ವೇಗವಾಗಿ ಎಣಿಸಿ ಹತ್ತು ಎನ್ನುತ್ತಾನೆ.ಲಿಂಗವನ್ನು ನೆಲದಲ್ಲಿಟ್ಟು ಅಲ್ಲಿಂದ ತೆರಳುತ್ತಾನೆ. ರಾವಣ ನೀರಿನಿಂದ ಮೇಲೆ ಬಂದು ನೋಡುತ್ತಾನೆ. ಆತ್ಮಲಿಂಗ ಅಲ್ಲಿಯೇ ಪ್ರತಿಷ್ಠಾಪನೆಯಾಗಿದೆ. ರಾವನ ಬರಿಗೈಯಲ್ಲಿ ಲಂಕೆಗಡ ಹಿಂದುರುತ್ತಾನೆ.

Advertisement

 

ಬಾಲ ಗಣೇಶ ಮತ್ತು ಪಾರ್ವತಿ:

ಒಂದು ದಿನ ಬಾಲ ಗಣೇಶ ಬೆಕ್ಕಿ  ನೊಂದಿಗೆ ಆಟವಾಡುತ್ತಿರುತ್ತಾನೆ.ಆಟವಾಡುವುದರ ಜತೆಗೆ ಬೆಕ್ಕಿನ ಬಾಲ ಹಿಡಿದು ಎತ್ತುವುದು, ನೆಲಕ್ಕೆ ಹೊಡೆಯುವುದು ಮುಂತಾದ ರೀತಿಯಲ್ಲಿ ಉಪಟಳ ನೀಡುತ್ತಿರುತ್ತಾನೆ. ಇದಾದ ಬಳಿಕ ತಾಯಿ ಪಾರ್ವತಿ ಬಳಿ ಬಂದ ಗಣೇಶ ತಾಯಿ ದೇಹದಲ್ಲಿ ಆಗಿರುವ ಗಾಯಗಳನ್ನು ಗಮನಿಸಿ ಪ್ರಶ್ನಿಸುತ್ತಾನೆ. ಇದಕ್ಕೆ ಪಾರ್ವತಿ ನೀನು ಮಾಡಿದ ಕಾರ್ಯದಿಂದ ನನಗೆ ದೇಹದಲ್ಲಿ ಗಾಯಗಳಾಗಿವೆ. ಬೆಕ್ಕಿ ನಂತೆ ನಿನ್ನ ಜತೆ ಆಟವಾಡುತ್ತಿದ್ದೆ ಎಂದು ಹೇಳುತ್ತಾಳೆ. ಅಲ್ಲದೆ ಪ್ರಾಣಿಗಳೊಂದಿಗೆ ಕೆಟ್ಟ ರೀತಿಯಲ್ಲಿ ನಡೆದುಕೊಳ್ಳಬಾರದು. ಎಲ್ಲ ಜೀವ ಸಂಕುಲಗಳನ್ನುನಾವು ಪ್ರೀತಿಸಬೇಕು ಎಂದು ಬುದ್ಧಿವಾದ ತಿಳಿಸುತ್ತಾಳೆ.

Advertisement

Udayavani is now on Telegram. Click here to join our channel and stay updated with the latest news.

Next