Advertisement

ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿಗೆ ಬೀದಿ ನಾಟಕ

12:52 PM Feb 15, 2022 | Team Udayavani |

ರಾಮನಗರ: ಸಾಂಕ್ರಾಮಿಕ ರೋಗಗಳ ಬಗ್ಗೆ ಜನತೆ ವಹಿಸಬೇಕಾದ ಎಚ್ಚರಿಕೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಬೀದಿ ನಾಟಕಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಲಕ್ಷ್ಮಣ್‌ ಹೇಳಿದರು.

Advertisement

ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ ನಡೆದ ಮುತ್ತುರಾಜ್‌ ಕಲಾ ತಂಡದ ಬೀದಿ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು.

ಪಾಲಿಸಿ: ಸಾಂಕ್ರಾಮಿಕ ರೋಗಗಳ ಕುರಿತು ಬೀದಿ ನಾಟಕದ ಮೂಲಕ ಅರಿವು ಮೂಡಿಸಿಕೊಂಡು ನಾಗರಿಕರು ಆರೋಗ್ಯ ಇಲಾಖೆಯ ಸಲಹೆ, ಸೂಚನೆಯನ್ನು ತಪ್ಪದೇ ಪಾಲಿಸಬೇಕು. ಈ ಮೂಲಕ ಆರೋಗ್ಯ ಸೇವೆಯು ಸದ್ಬಳಕೆ ಮಾಡಿಕೊಳ್ಳಲು ಮುಂದಾಗಬೇಕೆಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್‌. ಗಂಗಾಧರ್‌ ಮಾತನಾಡಿ, ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸಿಗುವ ಸೇವಾ ಸೌಲಭ್ಯಗಳ ಕುರಿತು ನಾಗರಿಕರಿಗೆ ಮಾಹಿತಿ ನೀಡಿದರು.

ನಾಗರಿಕರಿಗೆ ವಿಶೇಷ ಸೇವೆ: ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಕ್ಷೇಮ ಕೇಂದ್ರದಸೇವೆ ಸಲ್ಲಿಸುತ್ತಿದ್ದು ಇದರ ಮುಖ್ಯ ಉದ್ದೇಶಪ್ರಾಥಮಿಕ ಹಂತದಲ್ಲಿ ರೋಗಗಳ ಪತ್ತೆ ಹಚ್ಚಿ,ಪರೀಕ್ಷೆ, ಚಿಕಿತ್ಸೆ ನೀಡಲಾಗುತ್ತಿದೆ. ಜತೆಗೆ ಹಿರಿಯನಾಗರಿಕರಿಗೆ ವಿಶೇಷ ಸೇವೆಯನ್ನು ನೀಡಲಾಗುತ್ತಿದೆ ಎಂದು ಹೇಳಿದರು.

Advertisement

ಎಬಿಎಆರ್‌ಕೆ ಕಾರ್ಯಕ್ರಮ ದಡಿ ಬಿಪಿಎಲ್ ಕುಟುಂಬದ ಸದಸ್ಯರಿಗೆ ವರ್ಷದಲ್ಲಿ 5 ಲಕ್ಷ ರೂ.ವರೆಗೆ ಎಪಿಎಲ್ ಕುಟುಂಬದ ಸದಸ್ಯರಿಗೆ ವರ್ಷದಲ್ಲಿ 1.5 ಲಕ್ಷ ರೂ.ಗಳವರೆಗೆ ಚಿಕಿತ್ಸೆ ನೀಡಲಾಗುವುದು ಎಂದು ವಿವರಿಸಿದರು.

ಉಚಿತ ಚಿಕಿತ್ಸೆ ಲಭ್ಯ: ಈ ಯೋಜನೆಯಲ್ಲಿ ಮಾರಣಾಂತಿಕ ಕಾಯಿಲೆಗಳಾದ ಕ್ಯಾನ್ಸರ್‌, ಹೃದಯ ಸಂಬಂಧಿ ಕಾಯಿಲೆ, ಅಪಘಾತ, ಸುಟ್ಟಗಾಯ, ಕಿಡ್ನಿ ತೊಂದರೆ ಹಾಗೂ ತಾಯಿ ಮತ್ತು ಮಕ್ಕಳ ಆರೋಗ್ಯಸೇವೆ ಇತ್ಯಾದಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದ್ದು ಎಲ್ಲರೂ ಕಾರ್ಡ್‌ ಪಡೆಯುವಂತೆ ಸಲಹೆ ನೀಡಿದರು.

ಈ ಯೋಜನೆಗಳ ಕುರಿತಂತೆ ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸುತ್ತಿದ್ದು ಸಾರ್ವಜನಿಕರು ಮಾಹಿತಿಯನ್ನು ತಿಳಿದುಕೊಂಡು ಯೋಜನೆಯಲ್ಲಿ ದೊರೆಯುವ ಸೇವೆ, ಸೌಲಭ್ಯಗಳನ್ನು ಪಡೆಯುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವಿಭಾಗೀಯ ಸಂಚಲನಾಧಿಕಾರಿ ಪುರುಷೋತ್ತಮ್, ಐಇಸಿ ವಿಭಾಗದ ಮಧು, ಮುತ್ತುರಾಜ್ ಕಲಾತಂಡದ ಮುಖ್ಯಸ್ಥ ಶ್ರೀನಿವಾಸ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next