Advertisement
ಇದನ್ನೂ ಓದಿ:Free tomatoes: ಇವರ ಆಟೋದಲ್ಲಿ ಪ್ರಯಾಣಿಸಿದರೆ ಟೊಮ್ಯಾಟೋ ಫ್ರೀ.. ಕಂಡಿಷನ್ ಅಪ್ಲೈ
Related Articles
Advertisement
ಮುಂದಿನ ಕೆಲವು ದಿನಗಳ ಕಾಲ ಸೌರಾಷ್ಟ್ರದ ಕೆಲವು ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಗುಜರಾತ್ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಂಗಳವಾರ (ಜು.18) ಬೆಳಗ್ಗೆ 6ಗಂಟೆಯಿಂದ ಕೇವಲ 14 ಗಂಟೆಗಳ ಅವಧಿಯಲ್ಲಿ ಗಿರ್ ಸೋಮನಾಥ್ ಜಿಲ್ಲೆಯ ಸೂತ್ರಪಾಡಾ ತಾಲೂಕಿನಲ್ಲಿ 345 ಮಿಲಿ ಮೀಟರ್ ದಾಖಲೆಯ ಮಳೆಯಾಗಿದೆ. ರಾಜ್ ಕೋಟ್ ಜಿಲ್ಲೆಯ ಧೋರಾಜಿ ತಾಲೂಕಿನಲ್ಲಿ 250 ಮಿಲಿ ಮೀಟರ್ ಮಳೆಯಾಗಿರುವುದಾಗಿ ವರದಿ ತಿಳಿಸಿದೆ.
ಮುಂಬೈನಲ್ಲೂ ಭಾರೀ ಮಳೆ:
ಕಳೆದ 24 ಗಂಟೆಯಲ್ಲಿ ಸುರಿದ ಭಾರೀ ಮಳೆಗೆ ವಾಣಿಜ್ಯ ನಗರಿ ಮುಂಬೈ ತತ್ತರಿಸಿ ಹೋಗಿದೆ. 24ಗಂಟೆಯಲ್ಲಿ 100 ಮಿಲಿ ಮೀಟರ್ ಮಳೆಯಾಗಿದ್ದು, ಮುಂಬೈ ಮತ್ತು ಥಾಣೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ರಾಯ್ ಗಢ್, ಪುಣೆ ಮತ್ತು ಪಾಲ್ಘಾಟ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಾಖಲೆಯ ಮಳೆ, ಗಾಳಿಗೆ 26 ಮರದ ಕೊಂಬೆಗಳು ಮುರಿದು ಬಿದ್ದಿದ್ದು, ನಾಲ್ಕು ಆವರಣದ ಗೋಡೆಗಳು ಕುಸಿದು ಬಿದ್ದಿರುವುದಾಗಿ ವರದಿಯಾಗಿದೆ.