ಶಹಾಬಾದ: ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಎಲ್ಲರೂ ಒಂದಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೈ ಬಲಬಡಿಸೋಣ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ ಹೇಳಿದರು.
ಭಾರತೀಯ ಜನತಾ ಪಕ್ಷದ ಚಿತ್ತಾಪುರ ಮಂಡಲ ವತಿಯಿಂದ ಬುಧವಾರ ಭಂಕೂರ ಗ್ರಾಮದ ದೇವಿ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಸ್ತಾರಕರ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಕಾರ್ಯಕರ್ತರೇ ಪಕ್ಷದ ಜೀವಾಳ. ನಾವು ಎಲ್ಲರೂ ಒಂದಾಗಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಗತರಾಗಬೇಕಿದೆ. ರಾಜ್ಯದಲ್ಲಿ ಬಿಜೆಪಿ ಅ ಧಿಕಾರಕ್ಕೆ ಬರಲು ಕಾರ್ಯಕರ್ತರೇ ಕಾರಣ ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ಮುಟ್ಟಿಸಿ. ಸ್ಥಳೀಯ ಚುನಾವಣೆ ಎದುರಿಸಲು ಬೂತ್ಮಟ್ಟದ ಶಕ್ತಿಕೇಂದ್ರ, ಮಹಾಶಕ್ತಿ ಕೇಂದ್ರ, ಫೇಜ್ ಪ್ರಮುಖ ಸಮಿತಿಗಳನ್ನು ಗಟ್ಟಿಗೊಳಿಸೋಣ ಎಂದು ಹೇಳಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಉಸ್ತುವಾರಿ ಲಿಂಗರಾಜ ಬಿರಾದಾರ, ಚಿತ್ತಾಪುರ ಮಂಡಲ ಅಧ್ಯಕ್ಷ ನೀಲಕಂಠ ಪಾಟೀಲ ವೇದಿಕೆ ಮೇಲಿ ದ್ದರು. ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಪ್ರಮುಖರು, ವಿಸ್ತಾರಕರು ಇದ್ದರು. ನಾಗರಾಜ ಹೂಗಾರ ನಿರೂಪಿಸಿದರು, ಸಿದ್ರಾಮ ಕುಸಾಳೆ ಸ್ವಾಗತಿಸಿದರು, ರಾಮದಾಸ ಚವ್ಹಾಣ ವಂದಿಸಿದರು.