ಸ್ಟ್ಯಾಂಡಿಂಗ್ ಹಾಮ್‌ಸ್ಟ್ರಿಂಗ್ ಸ್ಟ್ರೆಚ್ ನೆಲದ ಮೇಲೆ ನಿಂತು ಕೈಗಳಿಂದ ಹಿಮ್ಮಡಿಯನ್ನು ಮುಟ್ಟಿಸುವುದು. ನೇರವಾಗಿ ನಿಂತು, ನೆಲದ ಕಡೆಗೆ ನಿಧಾನವಾಗಿ ನಿಮ್ಮ ತಲೆಯನ್ನು ಬಗ್ಗಿಸುವುದು. ನಿಮ್ಮ ತಲೆ, ಕುತ್ತಿಗೆ ಹಾಗೂ ಭುಜಗಳು ಆರಾಮಗೊಂಡಿರುವುದನ್ನು ಗಮನಿಸಿ. ಈಗ ನಿಮ್ಮ ಕೈಗಳಿಂದ ಹಿಮ್ಮಡಿಯನ್ನು 45 ಸೆಕೆಂಡುಗಳಿಂದ 2 ನಿಮಿಷಗಳವರೆಗೆ ಹಿಡಿದುಕೊಳ್ಳಿ ಅನಂತರ ಸಹಜ ಸ್ಥಿತಿಗೆ ಮರಳಿ.
Advertisement
ಪಿರಿಫಾರ್ಮಿಸ್ ಸ್ಟ್ರೆಚ್ನಿಮ್ಮ ಕಾಲನ್ನು ಮುಂದಕ್ಕೆ ಚಾಚಿಕೊಂಡು ಆರಾಮವಾಗಿ ನೆಲದ ಮೇಲೆ ಕುಳಿತುಕೊಳ್ಳಿ. ಅನಂತರ ಎಡಗಾಲನ್ನು ನಿಮ್ಮ ಬಲ ಮೊಣಕಾಲಿನ ಪಕ್ಕಕ್ಕೆ ಇಡಿ. ನಿಮ್ಮ ಎಡಗೈಯನ್ನು ನಿಮ್ಮ ಬೆನ್ನಿನ ಹಿಂದೆ ನೆಲದ ಮೇಲೆ ಇಡಿ ಮತ್ತು ಬಲಗೈಯನ್ನು ನಿಮ್ಮ ಎಡಗಾಲಿನ ಮೊಣಕಾಲುಗಳ ಮೇಲೆ ಇರಿಸಿ. ನಿಮ್ಮ ಬೆನ್ನಿನ ಕಡೆಗೆ ಮುಖ ಮಾಡಿ ದೇಹವನ್ನು ಎಡಕ್ಕೆ ತಿರುಗಿಸಿ. ದೇಹವನ್ನು ಸಾಧ್ಯವಾದಷ್ಟು ಹಿಗ್ಗಿಸಿ.
ನಿಮ್ಮ ಮೊಣಕಾಲುಗಳೊಂದಿಗೆ ನೆಲದ ಮೇಲೆ ಆರಾಮವಾಗಿ ಕುಳಿತು ಮೊಣಕಾಲುಗಳನ್ನು ಒಟ್ಟಿಗೆ ಇರಿಸಿ. ನಿಮ್ಮ ಕೈಗಳನ್ನು ನಿಮ್ಮ ಹಿಂಭಾಗದ ಕೆಳ ಬೆನ್ನು ತಾಗುವಂತೆ ಇಟ್ಟು ನಿಮ್ಮ ತೋಳುಗಳನ್ನು ವಿಸ್ತರಿಸುತ್ತಾ ಮೇಲಕ್ಕೆ ಚಾಚಿ. ನಿಮ್ಮ ಭುಜದ ಬೆಂಡ್‌ಗಳನ್ನು ಒಟ್ಟಿಗೆ ಸೇರುವಂತೆ ಮಾಡಿ ಮತ್ತು ನಿಮ್ಮ ತಲೆಯನ್ನು ಮುಂದಕ್ಕೆ ಬಾಗಿಸಿ. ಇದನ್ನು 30 ಸೆಕೆಂಡುಗಳ ಕಾಲ ಮಾಡಿ ಅನಂತರ ನಿಧಾನವಾಗಿ ಬಿಡಿ. ಸೈಡ್ ಬೆಂಡ್ ಸ್ಟ್ರೆಚ್
ಕಾಲುಗಳನ್ನು ಮಡಚಿಕೊಂಡು ನೆಲದ ಮೇಲೆ ಆರಾಮವಾಗಿ ಕುಳಿತುಕೊಳ್ಳಿ. ಎಡಗೈಯನ್ನು ಬಲಗಾಲಿನ ತೊಡೆಯ ಮೇಲೆ ಆರಾಮವಾಗಿ ಇಟ್ಟುಕೊಂಡು, ನಿಮ್ಮ ಬಲಗೈಯನ್ನು ತಲೆಯ ಮೇಲ್ಭಾಗಕ್ಕೆ ಬರುವಂತೆ ಚಾಚಿಕೊಳ್ಳಿ. ನಂತರ ತಲೆ ಮತ್ತು ಬಲಗೈಯನ್ನು ಎಡಭಾಗಕ್ಕೆ ವಾಲಿಸಿ. ಈ ಸ್ಟ್ರೆಚ್ ಅನ್ನು 30 ಸೆಕೆಂಡುಗಳ ಕಾಲ ಮಾಡಿ. ಮತ್ತೆ ಇದೇ ರೀತಿ ಮತ್ತೂಂದು ಕಡೆಗೆ ಮಾಡಿ.
Related Articles
ಮಂಡಿಯನ್ನು ಮಡಚಿ, ಬೆನ್ನನ್ನು ನೇರವಾಗಿಸಿ ನೆಲದ ಮೇಲೆ ಕುಳಿತುಕೊಳ್ಳಿ. ಮೊಣಕಾಲನ್ನು ಎರಡು ಬದಿಗೆ ವಿಸ್ತರಿಸಿ. ಕಾಲುಗಳ ಅಡಿಭಾಗ ಮಧ್ಯದಲ್ಲಿ ಸಂಧಿಸುವಂತೆ ಹಾಗೂ ಪಾದದ ಅಂಚುಗಳು ನೆಲಕ್ಕೆ ತಾಗುವಂತೆ ಜೋಡಿಸಿ. ತುದಿಗಾಲನ್ನು ಹಿಡಿದುಕೊಂಡು ಕಿಬ್ಬೊಟ್ಟೆಯ ಸ್ನಾಯುಗಳನ್ನು ದೇಹದೊಂದಿಗೆ ಕಾಲುಗಳ ಕಡೆಗೆ ಬಗ್ಗಿಸಿ. ಮೊಣಕಾಲು ನೆಲದ ಕಡೆಗಿರುವಂತೆ ನೋಡಿಕೊಳ್ಳಿ.
Advertisement
ಟ್ರಿಸೆಪ್ಸ್ ಸ್ಟ್ರೆಚ್ನೆಲದ ಮೇಲೆ ಮಂಡಿಯೂರಿ ನಿಂತು ನಿಮ್ಮ ತಲೆಯ ಮೇಲೆ ತೋಳುಗಳನ್ನು ವಿಸ್ತರಿಸುತ್ತಾ ಆರಾಮವಾಗಿ ಚಾಚಿ. ನಿಮ್ಮ ಎಡ ಮೊಣಕೈಯನ್ನು ಬೆಂಡ್ ಮಾಡಿ ನಿಮ್ಮ ಬೆನ್ನಿನ ಮಧ್ಯಭಾಗವನ್ನು ಸ್ಪರ್ಶಿಸಲು ಪ್ರಯತ್ನಿಸಿ. ನಿಮ್ಮ ಬಲಗೈಯನ್ನು ನಿಮ್ಮ ಎಡ ಕೈಯ ಮೊಣಕೈ ಮೇಲಿಟ್ಟು ತಲೆಯ ಬಳಿಗೆ ಎಳೆಯಿರಿ. ತೋಳನ್ನು ಬದಲಿಸಿ ಇದನ್ನೇ ಪುನರಾವರ್ತಿಸಿ. - ಕಾರ್ತಿಕ್ ಚಿತ್ರಾಪುರ