ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದೇಶಿ ಪ್ರಜೆಗಳು ಅಕ್ರಮವಾಗಿ ವಾಸಿಸುತ್ತಿದ್ದರೆ ಅವರನ್ನು ಬಂಧಿಸಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಈ ಬಗ್ಗೆ ಸರ್ವೆ ಮಾಡುವಂತೆ ಹೇಳಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸಭೆ ಬಳಿಕ ಹೇಳಿಕೆ ನೀಡಿದ ಅವರು, ಸರಕಾರ ಯಾವುದೇ ಧರ್ಮಗಳ ಬಗ್ಗೆ ಪೂರ್ವಾಗ್ರಹ ಹೊಂದಿ ಕ್ರಮ ತೆಗೆದುಕೊಳ್ಳುತ್ತಿಲ್ಲ. ಕಾನೂನು ಉಲ್ಲಂಘಿಸುವವರ ವಿರುದ್ದ ಕ್ರಮ ಎಂದು ಹೇಳಿದ್ದಾರೆ.
ಜಿಲ್ಲೆಯಲ್ಲಿ ನ್ಯಾಯಾಲಯಗಳಲ್ಲಿ ಆರೋಪಿಗಳಿಗೆ ಶಿಕ್ಷೆಯ ಪ್ರಮಾಣ ಕಡಿಮೆ ಆಗಿರುವ ಬಗ್ಗೆ ಸರಕಾರಿ ಅಭಿಯೋಜಕರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದರು.
ಇದನ್ನೂ ಓದಿ : ಗುದನಾಳದಲ್ಲಿ 1ಕೆಜಿ ಚಿನ್ನ! ; ಕಸ್ಟಮ್ಸ್ ಅಧಿಕಾರಿಗಳಿಂದ ವಶ