Advertisement
ಚಿಕ್ಬಳ್ಳಾಪುರ ಜಿಲ್ಲೆಯಲ್ಲಿ ನಡೆದ ದುರಂತ ಸ್ಥಳಕ್ಕೆ ಭೇಟಿ ಮಾಡಿ ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಈಗಾಗಲೇ ಐದು ಜನರ ಮೃತದೇಹಗಳು ಪತ್ತೆಯಾಗಿದ್ದು ಮತ್ತೊಬ್ಬ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ ಎಂದರು.
Related Articles
Advertisement
ಕಳೆದ ತಿಂಗಳು ಶಿವಮೊಗ್ಗ ಜಿಲ್ಲೆಯಲ್ಲಿ ದುರಂತ ಸಂಭವಿಸಿದ ಬಳಿಕ ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ಅಕ್ರಮವಾಗಿ ಗಣಿಗಾರಿಕೆ ನಡೆಸಿದ ವಿರುದ್ಧ ಕಠಿಣ ಕ್ರಮ ಜರುಗಿಸಲು ಸೂಚನೆ ನೀಡಿದ್ದಾರೆ. ಇದರನ್ವಯ ಈಗಾಗಲೇ ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ಗಣಿಗಾರಿಕೆ ನಡೆಸಿದವರನ್ನು ಪತ್ತೆಹಚ್ಚಿ ಸೂಕ್ತ ರೀತಿಯ ಕಾನೂನು ರೀತಿಯ ಕ್ರಮ ಜರುಗಿಸಲಾಗಿದೆ ಎಂದರು.
ಇದನ್ನೂ ಓದಿ: ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಪೋಟ ಪ್ರಕರಣ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ
ಜಿಲ್ಲೆಯಲ್ಲಿ ಕ್ವಾರಿ ಮತ್ತು ಗಣಿಗಾರಿಕೆಗೆ ನಡೆಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಪರವಾನಿಗೆಯನ್ನು ಪಡೆಯಬೇಕಾಗುತ್ತದೆ. ಕಲ್ಲುಬಂಡೆಗಳನ್ನು ಸ್ಪೋಟಿಸಲು ಡೈರೆಕ್ಟರ್ ಜನರಲ್ ಮೈನಿಂಗ್ ಸೇಫ್ಟಿ ಇಲಾಖೆಯಿಂದ ಪರವಾನಿಗೆ ಪಡೆದವರು ಮಾತ್ರ ಸ್ಪೋಟಿಸಬೇಕು ಎಂದು ಕೇಂದ್ರ ಸರ್ಕಾರ ಸ್ಪಷ್ಟವಾದ ನೀತಿ ನಿಯಮ ರೂಪಿಸಿದೆ ಎಂದರು