Advertisement

ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ: ಡಿಸಿ

04:16 PM May 07, 2021 | Team Udayavani |

ಯಾದಗಿರಿ: ಕೊರೊನಾ ಎರಡನೇ ಅಲೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಲಾಕ್‌ಡೌನ್‌ ನಿಯಮ ಕಟ್ಟುನಿಟ್ಟಿನ ಪಾಲಿಸಬೇಕು. ಅಂಗಡಿ ಮಾಲೀಕರು ನಿಯಮ ಉಲ್ಲಂಘಿಸಿ ವ್ಯಾಪಾರ-ವಹಿವಾಟು ಮಾಡುತ್ತಿದ್ದರೆ ಅಂತಹ ಅಂಗಡಿ ಮಾಲೀಕರ ವಿರುದ್ಧ ದಂಡದ ಜತೆಗೆ ಕಠಿಣ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಹೇಳಿದರು.

Advertisement

ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿ ಪಾಲನೆ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅ ಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು. ಸರ್ಕಾರದ ಮಾರ್ಗಸೂಚಿಯಂತೆ ಪ್ರತಿನಿತ್ಯ ಬೆಳಿಗ್ಗೆ 6ರಿಂದ 12ರ ವರೆಗೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಸಮಯ ಮೀರಬಾರದು ಎಂದು ಎಚ್ಚರಿಸಿದರು. ಗ್ರಾಮೀಣ ಭಾಗದಲ್ಲಿ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಗ್ರಾಮಮಟ್ಟದ ಕಾರ್ಯಪಡೆ ಸಮಿತಿ ಸಭೆಯನ್ನು ಕಾಲಕಾಲಕ್ಕೆ ಕರೆದು, ಕೊರೊನಾ ವೈರಸ್‌ ಹರಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಹಾಗೂ ಅನಾವಶ್ಯಕ ಓಡಾಡುವ ಜನರಿಗೆ ದಂಡ ವಿಧಿ ಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವೈಯಕ್ತಿಕ ಸ್ವತ್ಛತೆಗೆ ಜಾಗೃತಿ ಮೂಡಿಸಬೇಕು. ಕರಪತ್ರ, ಧ್ವನಿಮುದ್ರಿಕೆ, ಬ್ಯಾನರ್‌ ಇನ್ನಿತರ ವಿಧಾನಗಳ ಮೂಲಕ ರೋಗ ಲಕ್ಷಣಗಳು ಹಾಗೂ ಕೊರೊನಾ ಹರಡುವಿಕೆ ತಡೆಯುವ ಕುರಿತು ಜಿಲ್ಲೆಯ ಜನರಲ್ಲಿ ವ್ಯಾಪಾಕ ಜಾಗೃತಿ ಮೂಡಿಸಬೇಕು. ಈ ಮೂಲಕ ಕೊರೊನಾ ಎರಡನೇ ಅಲೆಯಿಂದ ಮುಕ್ತಿ ಪಡೆಯಬೇಕಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next