Advertisement
ಖಾಸಗಿ ಹೋಟೆಲ್‌ನಲ್ಲಿ ನಿರಂತರ ಕುಡಿಯುವ ನೀರು ಸರಬರಾಜು ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜನಪ್ರತಿನಿಧಿಗಳ ಸಲಹೆ-ಸಹಕಾರ ಪಡೆದು ಜಲ ಸಂಗ್ರಹಾಗಾರ ಹಾಗೂ ಕೊಳವೆ ಮಾರ್ಗ ನಿರ್ಮಿಸಬೇಕು. ಪ್ರತಿ ತಿಂಗಳು ಯೋಜನೆ ಪ್ರಗತಿಯನ್ನು ಜಿಲ್ಲಾಧಿಕಾರಿಗೆ ನೀಡಬೇಕು. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಅರ್ಪಣಾ ಭಾವದಿಂದ ಯೋಜನೆ ಜಾರಿಗೊಳಿಸಿ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.
Related Articles
Advertisement
ನಗರಾಭಿವೃದ್ಧಿ ಇಲಾಖೆ ಮೇಲ್ವಿಚಾರಣೆ
ಮಹಾನಗರದಲ್ಲಿ ಅನುಷ್ಠಾನಗೊಳ್ಳಲಿರುವ ನಿರಂತರ ಯೋಜನೆ ಬಗ್ಗೆ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆಯಾಗಿದೆ. ಕಾಮಗಾರಿಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸಿಕೊಂಡು ಮುನ್ನಡೆಯುವಂತೆ ಸೂಚಿಸಲಾಗಿದೆ. ಯೋಜನೆಯ ಪ್ರತಿಯೊಂದು ಪ್ರಗತಿಯನ್ನು ನಗರಾಭಿವೃದ್ಧಿ ಇಲಾಖೆ ಮೇಲ್ವಿಚಾರಣೆ ನಡೆಸಲಿದೆ. ಪ್ರಗತಿ ವರದಿಯನ್ನು ಕೂಡ ಪಡೆಯುವಂತೆ ಸೂಚಿಸಲಾಗಿದೆ ಎಂದು ಸಭೆಯ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುದ್ದಿಗಾರರಿಗೆ ತಿಳಿಸಿದರು.
ನನ್ನನ್ನು ಯಾಕೆ ಕರೆಸಿದ್ದೀರಿ?
ನಿರಂತರ ಕುಡಿಯುವ ನೀರು ಯೋಜನೆಯಲ್ಲಿ ಉಂಟಾಗಿರುವ ಸಮಸ್ಯೆಗಳು, ಅವುಗಳಿಗೆ ಪರಿಹಾರದ ಕುರಿತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ಕರೆದಿದ್ದರು. ಸಭೆಯಲ್ಲಿ ಕೆಲ ಗಂಭೀರ ಸಮಸ್ಯೆಗಳು, ಎಲ್ ಆ್ಯಂಡ್ ಟಿ ಕಂಪನಿ ನಡೆದುಕೊಳ್ಳುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ವ್ಯಕ್ತವಾದವು. ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವುದಿಲ್ಲ. ಹೀಗಾಗಿ ಜನರು ನಮ್ಮನ್ನೇ ಪ್ರಶ್ನೆ ಮಾಡುತ್ತಿದ್ದಾರೆ ಎಂದು ಶಾಸಕರೊಬ್ಬರು ದೂರಿದರು. ಇಂತಹ ಹಲವು ಸಭೆಗಳನ್ನು ಮಾಡಿ ಸಾಕಷ್ಟು ಸೂಚನೆ ನೀಡಿದರೂ ಸುಧಾರಣೆಯಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಮಾತುಗಳಿಂದ ಕೊಂಚ ಗರಂ ಆದ ಮುಖ್ಯಮಂತ್ರಿಗಳು ಹಾಗಾದರೆ ಸಭೆಗೆ ನನ್ನನ್ಯಾಕೆ ಕರೆಸಿದ್ದೀರಿ ಎಂದು ಬೇಸರ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.
ಜಾಲಾಡಿದ ಜನಪ್ರತಿನಿಧಿಗಳು
ಯೋಜನೆ ಅನುಷ್ಠಾನ ವಿಚಾರದಲ್ಲಿ ಉದ್ಭವವಾಗಿರುವ ಗೊಂದಲಗಳು ಕುರಿತು ಜನಪ್ರತಿನಿಧಿಗಳು ಎಲ್ ಆ್ಯಂಡ್ ಟಿ ಕಂಪನಿ ವಿರುದ್ಧ ಸಾಕಷ್ಟು ಅಸಮಾಧಾನ ವ್ಯಕ್ತಪಡಿಸಿದರು. ನಗರದಲ್ಲಿ 15 ಜಲ ಸಂಗ್ರಹಾಗಾರಕ್ಕೆ ಸ್ಥಳ ಗುರುತಿಸಿರುವುದಾಗಿ ಕಂಪನಿ ಹೇಳುತ್ತಿದೆ. ಎಲ್ಲಿ, ಯಾರ ಗಮನಕ್ಕೆ ತಂದು ಸ್ಥಳ ಗುರುತಿಸಿದ್ದಾರೆ ಎಂದು ಶಾಸಕರು ಗರಂ ಆದರು. ಆರಂಭದಿಂದಲೂ ಕಂಪನಿ ಇದೇ ಗೊಂದಲ ಮಾಡಿಕೊಂಡು ಬರುತ್ತಿದೆ ಎಂದು ಒಕ್ಕೊರಲಿನಿಂದ ಕಂಪನಿ ನಡೆ ಖಂಡಿಸಿದರು. ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ ನಿರ್ಮಿಸಿದ ರಸ್ತೆಯನ್ನು ಅಗೆದಿದ್ದಾರೆ. ಸ್ಥಳೀಯವಾಗಿ ಯಾರನ್ನು ಸಂಪರ್ಕಿಸಿಲ್ಲ ಎಂದು ಅಸಮಾಧಾನ ಹೊರಹಾಕಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಯಾವ ನಗರದಲ್ಲಿ ಕಲುಷಿತ ನೀರು ಬರುತ್ತಿದೆ, ಎಷ್ಟು ದಿನಕ್ಕೊಮ್ಮೆ ನೀರು ಬರುತ್ತಿದೆ ಎನ್ನುವುದರ ಬಗ್ಗೆ ಮಾಹಿತಿ ನೀಡಿ ಕಂಪನಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಪ್ರಮುಖರ ಪ್ರತ್ಯೇಕ ಸಭೆ
ನಿರಂತರ ಕುಡಿಯುವ ನೀರು ಯೋಜನೆಯಲ್ಲಿ ಉಂಟಾಗಿರುವ ಸಮಸ್ಯೆಗಳು ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಪ್ರಮುಖರ ಸಭೆ ಕರೆಯಲಾಗಿತ್ತು. ಆದರೆ ಸಭೆಗೆ ಕೆಯುಡಿಐಎಫ್‌ಸಿ, ಮಹಾನಗರ ಪಾಲಿಕೆ ಅಧಿಕಾರಿಗಳು, ಸದಸ್ಯರು ನೂರಾರು ಸಂಖ್ಯೆಯಲ್ಲಿ ಸೇರಿದ್ದರು. ಇದನ್ನು ಗಮನಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳನ್ನು ಗದರಿದರು. ಹೀಗಾಗಿ ಬೇರೊಂದು ಸಭಾಂಗಣದಲ್ಲಿ ಜನಪ್ರತಿನಿಧಿಗಳು, ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯನ್ನು ಪ್ರತ್ಯೇಕವಾಗಿ ನಡೆಸಿದರು.