Advertisement

ತಪ್ಪು ಮಾಹಿತಿ ನೀಡಿದಲ್ಲಿ ಕಠಿನ ಕ್ರಮ: ಡಿಸಿ

10:53 AM Jun 04, 2020 | mahesh |

ಉಡುಪಿ: ಜಿಲ್ಲೆಗೆ ಹೊರ ಜಿಲ್ಲೆಯಿಂದ ಆಗಮಿಸುವವರು ಕ್ವಾರಂಟೈನ್‌ಗೆ ತೆರಳುವ ಮುಂಚಿತ ತಪ್ಪು ವಿಳಾಸ, ದೂರವಾಣಿ ಸಂಖ್ಯೆ ನೀಡಿದಲ್ಲಿ, ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಎಚ್ಚರಿಸಿದ್ದಾರೆ.

Advertisement

ಹೊರ ರಾಜ್ಯದಿಂದ ಬರುವವರು ಕಡ್ಡಾಯವಾಗಿ ಸೇವಾ ಸಿಂಧು ಆ್ಯಪ್‌ನಲ್ಲಿ ನೊಂದಣಿ ಮಾಡಿಕೊಂಡಿರಬೇಕು. ರಸ್ತೆ ಮಾರ್ಗವಾಗಿ ಆಗಮಿಸುವವರು ರಾಜ್ಯದ ಗಡಿಯಲ್ಲಿರುವ ಸ್ವೀಕಾರ (BRC – BORDER RECEIVE CENTER) ಕೇಂದ್ರದಲ್ಲಿ ಸೂಚಿಸುವ, ತಮ್ಮ ಜಿಲ್ಲೆಯಲ್ಲಿನ, ಸ್ವೀಕಾರ ಕೇಂದ್ರ (DRC – DISTRICT RECEIVE CENTER)ಕ್ಕೆ ಹಾಜರಾಗಿ ತಮ್ಮ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನು ನಮೂದಿಸಿ ಕ್ವಾರಂಟೈನ್‌ಗೆ ಒಳಪಡಬೇಕು. ಮಹಾರಾಷ್ಟ್ರದಿಂದ ಆಗಮಿ ಸುವವರು 7 ದಿನಗಳ ಸಾಂಸ್ಥಿಕ ಮತ್ತು 7 ದಿನಗಳ ಹೋಂ ಕ್ವಾರಂಟೈನ್‌ಗೆ ಒಳಪಡಬೇಕು, ಇತರ ರಾಜ್ಯಗಳಿಂದ ಆಗಮಿಸುವವರು 14 ದಿನಗಳ ಹೋಂ ಕ್ವಾರಂಟೈನ್‌ಗೆ ಒಳಪಡಬೇಕು. ರೈಲಿನಲ್ಲಿ ಬರುವವರಿಗೆ ಅವರು ಇಳಿಯುವ ರೈಲು ನಿಲ್ದಾಣದಲ್ಲಿನ, ಜಿಲ್ಲಾ ಸ್ವೀಕಾರ ಕೇಂದ್ರದಲ್ಲಿ ವಿಳಾಸ ಮತ್ತು ದೂರವಾಣಿ ಸಂಖ್ಯೆ ನೊಂದಾ ಯಿಸಬೇಕು. ನೊಂದಾಯಿಸಿದ ಸ್ಥಳಕ್ಕೆ ತೆರಳದೆ ಮಾರ್ಗಮಧ್ಯೆ ತಪ್ಪಿಸಿ ಕೊಂಡಲ್ಲಿ ಅಂತವರ ವಿರುದ್ಧ ಎಫ್ಐಆರ್‌ ದಾಖಲಿಸಿ ಕ್ರಿಮಿನಲ್‌ ಮೊಕ ದ್ದಮೆ ಹೂಡಲಾಗುವುದು. ಕ್ವಾರಂಟೈನ್‌ ಕೇಂದ್ರಗಳಿಗೆ ತಮ್ಮ ಸ್ವಂತ ವೆಚ್ಚದಲ್ಲಿ ತೆರಳಬೇಕು ಎಂದು ಜಿಲ್ಲಾಧಿಕಾರಿ ಯವರು ಸೂಚಿಸಿದ್ದಾರೆ.

ಊಟೋಪಹಾರ ಅಗತ್ಯ ವ್ಯವಸ್ಥೆ
ಜಿಲ್ಲಾ ಸ್ವೀಕಾರ ಕೇಂದ್ರದಲ್ಲಿ ನೋಂದಣಿಯಾದ ಎಲ್ಲರಿಗೂ ಸೀಲ್‌ ಹಾಕಿ, ಸಂಬಂಧಪಟ್ಟ ತಾ|ನ ಗ್ರಾಮಗಳಿಗೆ ಕಳುಹಿಸಬೇಕು. ಗ್ರಾಮಗಳಿಗೆ ಆಗಮಿಸುವ ಹೊರರಾಜ್ಯದ ಜನತೆಗೆ ಗ್ರಾಮದಲ್ಲಿ ಕ್ವಾರಂಟೈನ್‌ಗೆ ಒಳಪಡಿಸಲು ಎಲ್ಲ ಗ್ರಾ.ಪಂ.ಗಳಲ್ಲಿ ಪ್ರತ್ಯೇಕ ಕ್ವಾರಂಟೈನ್‌ ಕೇಂದ್ರ ತೆರೆಯುವಂತೆ, ಎಲ್ಲ ತಾಲೂಕಿನ ಕಾರ್ಯ ನಿರ್ವಹಣಾಧಿಕಾರಿಗಳು ಗ್ರಾ.ಪಂ.ಗಳಲ್ಲಿನ ಕ್ವಾರಂಟೈನ್‌ ಕೇಂದ್ರಗಳಲ್ಲಿ ಊಟೋಪಹಾರಕ್ಕೆ ಅಗತ್ಯ ವ್ಯವಸ್ಥೆ ಮಾಡುವಂತೆ ಹಾಗೂ ಪ್ರತಿನಿತ್ಯ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದ್ದಾರೆ. ಹೊರರಾಜ್ಯದಿಂದ ಆಗಮಿಸುವವರು ಕಡ್ಡಾಯವಾಗಿ ಆರೋಗ್ಯ ಸೇತು, ಕ್ವಾರಂಟೈನ್‌ ವಾಚ್‌ ಮತ್ತು ಆಪ್ತಮಿತ್ರ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next