Advertisement

ಸುಳ್ಳು ಸುದ್ದಿ ಪ್ರಸಾರ ಮಾಡಿದರೆ ಕಠಿಣ ಕ್ರಮ

12:07 PM Apr 15, 2020 | Suhan S |

ಬೆಂಗಳೂರು: ಕೋವಿಡ್ 19 ವಿಚಾರಕ್ಕೆ ಸಂಬಂಧಿಸಿದಂತೆ ಸುಳ್ಳುಸುದ್ದಿ ಪ್ರಸಾರ ಮಾಡುವುದು ಹಾಗೂ ನಗರದ ಜನರಲ್ಲಿ ಆತಂಕ ಸೃಷ್ಟಿಮಾಡುವ ಸುದ್ದಿ ಮಾಧ್ಯಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ಕುಮಾರ್‌ ಎಚ್ಚರಿಸಿದ್ದಾರೆ.

Advertisement

ನಗರದಲ್ಲಿ ಕೋವಿಡ್ 19  ಸೋಂಕು ದೃಢಪಟ್ಟ 40 ವಾರ್ಡ್‌ಗಳನ್ನು ಸೀಲ್‌ಡೌನ್‌ ಮಾಡಲಾಗುವುದು ಎಂದು ಮಂಗಳವಾರ ಕೆಲವು ಸುದ್ದಿ ಮಾಧ್ಯಮಗಳು ಪ್ರಕಟಿಸಿದ್ದವು. ಇದರಿಂದ ಸಾಕಷ್ಟು ಗೊಂದಲ ಹಾಗೂ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಸಂಬಂಧ ಸ್ಪಷ್ಟಣೆ ನೀಡಿರುವ ಆಯುಕ್ತರು, ಪಾದರಾಯನಪುರ ಹಾಗೂ ಬಾಪೂಜಿನಗರ ವಾರ್ಡ್‌ಗಳನ್ನು ಮಾತ್ರ ಸೀಲ್‌ಡೌನ್‌ ಮಾಡಲಾಗಿದೆ.ಹೀಗಾಗಿ, ಜನ ಆತಂಕ ಪಡಬೇಕಾಗಿಲ್ಲ. ಅಲ್ಲದೆ, ನಿತ್ಯ ನಗರದಲ್ಲಿ ಕೊರೊನಾ ಸೋಂಕಿನ ಕುರಿತು ತೆಗೆದುಕೊಳ್ಳುವ ತೀರ್ಮಾನಗಳ ಸಂಪೂರ್ಣ ಮಾಹಿತಿ ನೀಡುತ್ತಿದ್ದೇವೆ ಎಂದು ಹೇಳಿದರು. ಕೋವಿಡ್ 19  ಸೋಂಕಿನ ಬಗ್ಗೆ ಜನ ಈಗಾಗಲೇ ಆತಂಕಕ್ಕೆ ಒಳಗಾಗಿದ್ದಾರೆ. ಇಂದಿನಿಂದ (ಬುಧವಾರದಿಂದ) ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಸುಳ್ಳು ಮತ್ತು ತುಪ್ಪು ಸುದ್ದಿ ಪ್ರಕಟಿಸುವ ಮತ್ತು ಪ್ರಸಾರ ಮಾಡುವ ಮಾಧ್ಯಮಗಳ ವಿರುದ್ಧ ಕಠಿಣಕ್ರಮ ಕೈಗೊಳ್ಳಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next