Advertisement

ಕ್ವಾರಂಟೈನ್‌ಗೆ ಅಡ್ಡಿಪಡಿಸಿದ್ರೆ ಕಠಿಣ ಕ್ರಮ

10:21 AM May 12, 2020 | mahesh |

ಶಿವಮೊಗ್ಗ: ಜಿಲ್ಲೆಯಲ್ಲಿ ಕ್ವಾರಂಟೈನ್‌ಗೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕ್ಯಾಪ್ಟನ್‌ ಪಿ.ಮಣಿವಣ್ಣನ್‌ ಅವರು ಸೂಚನೆ ನೀಡಿದರು. ಜಿಲ್ಲಾ ಧಿಕಾರಿ ಕಚೇರಿಯಲ್ಲಿ ಸೋಮವಾರ ಕರೋನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಅ ಧಿಕಾರಿಗಳ ಸಭೆಯಲ್ಲಿ ಪರಿಶೀಲನೆ ನಡೆಸಿದರು. ತಮ್ಮ ಊರಿನಲ್ಲಿ ಕ್ವಾರಂಟೈನ್‌ ಮಾಡದಂತೆ ಕೆಲವರು ಅಡ್ಡಿಪಡಿಸುತ್ತಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಇದು ಕಾನೂನು ವಿರೋಧಿಯಾಗಿದ್ದು, ಅಂತಹ ವ್ಯಕ್ತಿಗಳ ವಿರುದ್ಧ ಕೇಸು ದಾಖಲಿಸಿ ಕಠಿಣ ಕ್ರಮ ಜರುಗಿಸುವಂತೆ ಅವರು ತಿಳಿಸಿದರು.

Advertisement

ಕಂಟ್ರೋಲ್‌ ರೂಂ ಕರೆ ಮಾಡಿ: ಜಿಲ್ಲೆಯ ಎಲ್ಲ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಬಿಗಿಗೊಳಿಸಿ, ಹೊರಗಿನಿಂದ ಬಂದ ಪ್ರತಿಯೊಬ್ಬರ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಗ್ರಾಮೀಣ ರಸ್ತೆಗಳ ಮೂಲಕ ಬರುವವರ ಮೇಲೆಯೂ ನಿಗಾ ಇಟ್ಟು ಕ್ರಮ ಕೈಗೊಳ್ಳಲಾಗುತ್ತಿದೆ. ಜನರು ಸಹ ಈ ಕಾರ್ಯದಲ್ಲಿ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ತಮ್ಮ ಊರಿಗೆ, ಪಕ್ಕದ ಮನೆಗೆ ಹೊರಗಿನಿಂದ ಜನರು ಇತ್ತೀಚೆಗೆ ಹೊಸದಾಗಿ ಬಂದಿರುವುದು ಕಂಡು ಬಂದರೆ ತಕ್ಷಣ ಜಿಲ್ಲಾ ಧಿಕಾರಿ ಕಚೇರಿ ಕಂಟ್ರೋಲ್‌ ರೂಂ ಸಂಖ್ಯೆ 221010 (08182) ಕರೆ ಮಾಡಿ ಮಾಹಿತಿ  ನೀಡಬೇಕು ಎಂದು ಅವರು ಮನವಿ ಮಾಡಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಅವರು ಮಾತನಾಡಿ, ಜಿಲ್ಲೆಯಲ್ಲಿ ಆರೋಗ್ಯ ತಪಾಸಣೆ ತೀವ್ರಗೊಳಿಸಲಾಗಿದ್ದು, ಪ್ರತಿ ದಿನ 150 ಮಂದಿಯ ಗಂಟಲ ದ್ರವವನ್ನು ಸಂಗ್ರಹಿಸಿ ತಪಾಸಣೆ
ನಡೆಸಲಾಗುತ್ತಿದೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಪಿಪಿಇ ಕಿಟ್‌ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಬರುವವರ ಮಾಹಿತಿಯನ್ನು ಪ್ರತಿದಿನ ಪಡೆಯಲಾಗುತ್ತಿದ್ದು, ಉಸಿರಾಟದ ತೊಂದರೆಯಂತಹ ಪ್ರಕರಣಗಳ ಮೇಲೆ ನಿರಂತರ ನಿಗಾ ಇರಿಸಲಾಗಿದೆ. ಬೇರೆ ರಾಜ್ಯಗಳಿಗೆ ತೆರಳ ಬಯಸುವವರು, ಜಿಲ್ಲಾ ಧಿಕಾರಿ ಕಚೇರಿಯಲ್ಲಿ ಹೆಸರು ನೋಂದಾಯಿಸಿದರೆ ಅವರಿಗೆ ಬೆಂಗಳೂರಿನಿಂದ ರೈಲಿನಲ್ಲಿ ತೆರಳಲು ಅನುಕೂಲವಾಗುವಂತೆ ಬಸ್‌ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಸೇವಾ ಸಿಂಧು ಸೌಲಭ್ಯ: ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರ ಬಯಸುವವರು, ಇಲ್ಲಿಂದ ಹೊರ ರಾಜ್ಯಗಳಿಗೆ ತೆರಳಬಯಸುವವರು ಹಾಗೂ ಬೇರೆ ದೇಶಗಳಿಂದ ಇಲ್ಲಿಗೆ ಬರಲು ಬಯಸುವವರ ಅನುಕೂಲಕ್ಕಾಗಿ ಸರ್ಕಾರ ಸೇವಾ ಸಿಂಧು ಆಪ್‌ ನಲ್ಲಿ ಸೌಲಭ್ಯ ಕಲ್ಪಿಸಿದೆ. ಅಗತ್ಯವಿರುವವರು ಆಪ್‌ ಮೂಲಕ ಹೆಸರು ನೋಂದಾಯಿಸಿ ಪಾಸ್‌ ಸೌಲಭ್ಯ ಪಡೆಯಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಹೆಲ್ಪ್ಲೈನ್‌ ಸಂಖ್ಯೆ 080-22636800 ಸಂಪರ್ಕಿಸಬಹುದು ಎಂದು ಜಿಲ್ಲಾ ಧಿಕಾರಿ ಅವರು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶಾಂತರಾಜು, ಜಿಪಂ ಎಂ.ಎಲ್‌.ವೈಶಾಲಿ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಶಿಮ್ಸ್‌ ನಿರ್ದೇಶಕ ಡಾ.ಗುರುಪಾದಪ್ಪ ಮತ್ತಿತರ ಅ ಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next