Advertisement
ಬಂಟ್ವಾಳ ತಾಲೂಕಿನಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರವಿವಾರ ಸಚಿವರು ಹಾಗೂ ಸಂಸದರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ತುರ್ತು ಸಭೆ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ನಡೆಯಿತು.
Related Articles
Advertisement
ಕಟ್ಟುನಿಟ್ಟಿನ ಪಾಲನೆದಿನಸಿ ಸಾಮಗ್ರಿ, ಹಾಲು ದಿನಪತ್ರಿಕೆ, ಔಷಧ, ಊಟೋಪಚಾರ, ತರಕಾರಿ, ಹಣ್ಣು, ಮಾಂಸಗಳನ್ನು ಸಾರ್ವಜನಿಕರ ಬೇಡಿಕೆಯಂತೆ ಒದಗಿಸಲು ಹಾಗೂ ಬ್ಯಾಂಕಿಂಗ್ ಸೇವೆ, ಗ್ಯಾಸ್ ಇನ್ನಿತರ ಸೇವೆ, ತುರ್ತು ಸೇವೆಗಳನ್ನು ಒದಗಿಸಲು ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಸರಕಾರದ ಆದೇಶಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಚಿವರು ತಿಳಿಸಿದರು. ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ, ಅಧಿಕಾರಿಗಳು ಕಟ್ಟೆಚ್ಚರದಿಂದ ಕಾರ್ಯನಿರ್ವಹಿಸಬೇಕು, ವಲಸೆ ಕಾರ್ಮಿಕರು ಹಾಗೂ ಜಿಲ್ಲೆಯ ಸಮಸ್ಯೆಗಳಿಗೆ ತತ್‌ಕ್ಷಣ ಸ್ಪಂದಿಸಿ ಪರಿಹರಿಸಬೇಕು. ಆಹಾರಗಳ ಪೂರೈಕೆ ಸೇರಿದಂತೆ ಸ್ಥಳೀಯ ಶಾಸಕರು ಸಹಕಾರ ನೀಡಲಿದ್ದಾರೆ ಎಂದರು. ಶಾಸಕ ರಾಜೇಶ್ ನಾೖಕ್, ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಮಂಗಳೂರು ಸಹಾಯಕ ಕಮಿಷನರ್ ಮದನಮೋಹನ್ ಸಿ., ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್., ತಾ.ಪಂ. ಇಒ ರಾಜಣ್ಣ, ತಾಲೂಕು ಆರೋಗ್ಯಾಧಿಕಾರಿ ಡಾ| ದೀಪಾ ಪ್ರಭು, ಬಂಟ್ವಾಳ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಟಿ.ಡಿ. ನಾಗರಾಜ್, ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಉಪಸ್ಥಿತರಿದ್ದರು. 24 ಗಂಟೆ ನಿಯಂತ್ರಣ ಕೊಠಡಿ
ಬಂಟ್ವಾಳ ಕಸಬಾ ಹಾಗೂ ನರಿಕೊಂಬು ಗ್ರಾ.ಪಂ. ವ್ಯಾಪ್ತಿಯನ್ನು ಸೀಲ್‌ಡೌನ್ ಮಾಡಲಾಗಿದ್ದು, ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ನಿಯಂತ್ರಣ ಕೊಠಡಿ ತೆರೆದು ಸಾರ್ವಜನಿಕರ ಅನುಕೂಲಕ್ಕೆ ದೂರವಾಣಿ ಸಂಪರ್ಕ ನೀಡಲಾಗಿದೆ. 11 ಅಧಿಕಾರಿಗಳನ್ನು ಈ ಪ್ರದೇಶದಲ್ಲಿ ಹಗಲು-ರಾತ್ರಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸಾರ್ವಜನಿಕರು ಮನೆಯಲ್ಲಿದ್ದುಕೊಂಡು ಅಗತ್ಯ ಸಾಮಗ್ರಿಗಳನ್ನು ತರಿಸಿಕೊಳ್ಳಬಹುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.