Advertisement

150 ತಾಲೂಕು,16 ಜಿಲ್ಲಾಸ್ಪತ್ರೆಗಳಲ್ಲಿ ಕಟ್ಟುನಿಟ್ಟಿನ ಅಗ್ನಿ ಸುರಕ್ಷತಾ ಕ್ರಮ:ಸಚಿವ ಸುಧಾಕರ್

05:26 PM May 08, 2022 | Team Udayavani |

ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ, ವೈದ್ಯಕೀಯ ಕಾಲೇಜುಗಳಲ್ಲಿಅಗ್ನಿ ಅವಘಢದಂತಹ ಘಟನೆಗಳನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸಂಬಂಧ ಪಟ್ಟ ಇಲಾಖೆಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯ ಎಲ್ಲಾ ಆಸ್ಪತ್ರೆಗಳಲ್ಲೂ ಅಗ್ನಿ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಒತ್ತು ನೀಡಲಾಗಿದೆ.

Advertisement

ಕೆಲ ದಿನಗಳ ಹಿಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜೊತೆ ನಡೆದ ವಿಡಿಯೋ ಸಂವಾದದ ವೇಳೆ, ಪ್ರಧಾನಿಗಳು ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷಾ ಕ್ರಮಗಳನ್ನು ಅನುಸರಿಸುವ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಿದ್ದರು. ಪ್ರಧಾನಿಗಳ ಸೂಚನೆ ಮೇರೆಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ರಾಜ್ಯದ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಫೈರ್ ಸೇಪ್ಟಿ ಆಡಿಟ್ ಗೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಲಿಖಿತ ಸೂಚನೆ ನೀಡಿದ್ದರು. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ, 166 ಆಸ್ಪತ್ರೆಗಳಿಗೆ ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ತಲಾ 50,000 ರೂಪಾಯಿಗಳನ್ನು ನೀಡಲಾಗುತ್ತಿದೆ.

ಅಗ್ನಿ ಸುರಕ್ಷತಾ ಕ್ರಮಗಳ ಅಳವಡಿಕೆ ನಂತರ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಮೂಲಕ ಎಲ್ಲಾ ಆಸ್ಪತ್ರೆಗಳು ನಿರಪೇಕ್ಷಣಾ ಪತ್ರ ಪಡೆಯಬೇಕಿದೆ. ಮೇ 21ರ ತನಕ ಕಾಲಮಿತಿಯನ್ನು ಕೂಡ ನೀಡಲಾಗಿದೆ. 16 ಜಿಲ್ಲಾ ಆಸ್ಪತ್ರೆಗಳು, 150 ತಾಲೂಕು ಆಸ್ಪತ್ರೆಗಳಿಗೆ ಈಗಾಗಲೇಈ ಬಗ್ಗೆ ಸೂಚನೆಯನ್ನು ಕೂಡ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next