Advertisement

ಪ್ರಸಾದ ತಯಾರಿಕೆ, ವಿತರಣೆಗೆ ಕಠಿಣ ಮಾರ್ಗಸೂಚಿ

01:38 AM Jan 28, 2019 | |

ಬೆಳಗಾವಿ: ವಿಷ ಪ್ರಸಾದ ಪ್ರಕರಣಗಳು ಪದೇಪದೆ ನಡೆಯುತ್ತಿರುವುದರಿಂದ ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಸಾದ ತಯಾರಿಕೆ ಹಾಗೂ ವಿತರಣೆ ಬಗ್ಗೆ ಮಾರ್ಗಸೂಚಿ ರಚಿಸಿ ಸುತ್ತೋಲೆ ಹೊರಡಿಸಲು ಸಿಎಂ ಬಳಿ ಚರ್ಚಿಸಿ ನಿರ್ಧ ರಿಸಲಾಗುವುದು ಎಂದು ಮುಜರಾಯಿ ಸಚಿವ ಪರಮೇಶ್ವರ ನಾಯ್ಕ ತಿಳಿಸಿದರು.

Advertisement

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಂತಾಮಣಿಯ ಗಂಗಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಇಬ್ಬರು ಸಾವಿಗೀಡಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ತನಿಖೆ ಆರಂಭವಾಗಿದ್ದು, ವರದಿ ಬಂದ ಬಳಿಕ ಸಿಎಂ ಜತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಪ್ರಸಾದ ತಯಾರಿಕೆ, ಹಂಚಿಕೆ ವಿಷಯದಲ್ಲಿ ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಳ್ಳಲಿದೆ ಎಂದರು.

ರಾಜ್ಯದ ಮುಜರಾಯಿ ದೇವಸ್ಥಾನಗಳ ವಾರ್ಷಿಕ ಆದಾಯ ಆಧರಿಸಿ ಎ, ಬಿ ಹಾಗೂ ಸಿ ವರ್ಗಗಳಾಗಿ ವಿಂಗಡಿಸಲಾಗಿದೆ. ಅತಿ ಹೆಚ್ಚು ಆದಾಯ ಬರುವ ಎ, ಮಧ್ಯಮ ಆದಾಯ ಬಿ ಹಾಗೂ ಆದಾಯ ಇಲ್ಲದ ದೇವಸ್ಥಾನಗಳನ್ನು ಸಿ ಕೆಟಗರಿಯಲ್ಲಿ ವಿಂಗಡಿಸಲಾಗಿದೆ. ಎ ಹಾಗೂ ಬಿ ವರ್ಗದ ದೇವಸ್ಥಾನಗಳ ಇಂತಿಷ್ಟು ಆದಾಯವನ್ನು ಸಿ ವರ್ಗದ ದೇವಸ್ಥಾನಗಳಿಗೆ ಹಂಚಲಾಗುವುದು. ತಜ್ಞರ ಸಮಿತಿ ರಚಿಸಿ 3 ತಿಂಗಳ ಒಳಗೆ ಸಮಗ್ರ ವರದಿ ಪಡೆದು ಮೂಲ ಸೌಕರ್ಯ ಕಲ್ಪಿಸಲಾಗುವುದು. ದೇವಸ್ಥಾನಗಳಲ್ಲಿ ಸಹಾಯವಾಣಿ ಸ್ಥಾಪಿಸಲು ಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸವದತ್ತಿ ಯಲ್ಲಮ್ಮ ದೇವಸ್ಥಾನವನ್ನು ಎ ಕೆಟಗರಿಯಲ್ಲಿ ಸೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಯಲ್ಲಮ್ಮ ದೇವಸ್ಥಾನದಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಂಡು ದೇವಸ್ಥಾನದ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next