Advertisement

ಸರ್ಕಾರದ ನಿರ್ದೇಶನ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ

04:37 PM Jun 22, 2020 | Suhan S |

ರಾಯಬಾಗ: ಪರೀಕ್ಷೆಗೆ ಸಂಬಂಧಿಸಿದ ಎಲ್ಲ ಹಂತದ ಅಧಿಕಾರಿಗಳು ಇಲಾಖೆ ಸೂಚಿಸಿದ ಎಲ್ಲ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ, ಎಸ್‌ ಎಸ್‌ಎಲ್‌ಸಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಅಂತರ ಕಾಪಾಡಲು ವ್ಯವಸ್ಥೆ ಮಾಡಬೇಕೆಂದು ಬಿಇಒ ಎಚ್‌.ಎ.ಭಜಂತ್ರಿ ಹೇಳಿದರು.

Advertisement

ಪಟ್ಟಣದ ಬಿಇಒ ಕಚೇರಿ ಸಭಾಭವನದಲ್ಲಿ ನಡೆದ ಪರೀಕ್ಷಾ ಕೇಂದ್ರಗಳ ಪ್ರೌಢಶಾಲೆ ಮುಖ್ಯೋಪಾಧ್ಯಾಯರ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್‌ ಮಾಡಿ, ಎಲ್ಲ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ಪರೀಕ್ಷಾ ದಿನಗಳಲ್ಲಿ ಎಲ್ಲ ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಬೇಕು. ವಿದ್ಯಾರ್ಥಿಗಳು ಸ್ಯಾನಿಟೈಜರ್‌, ಕುಡಿಯುವ ನೀರಿನ ಬಾಟಲ್‌, ಟಿಫನ್‌ ಹಾಗೂ ಕಡ್ಡಾಯವಾಗಿ ಛತ್ರಿ ತರಬೇಕೆಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ಸೂಕ್ತ ಸಾರಿಗೆ ಸೌಲಭ್ಯವನ್ನು ಒದಗಿಸಬೇಕೆಂದು ಸೂಚಿಸಿದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್‌.ಎಸ್‌.ಪಾಟೀಲ ಕೋವಿಡ್‌-19 ಹರಡದಂತೆ ಮುನ್ನಚ್ಚರಿಕೆ ಕ್ರಮಗಳ ಮಾಹಿತಿ ನೀಡಿದರು.

ಕ್ಷೇತ್ರ ಸಮನ್ವಯಾಧಿಕಾರಿ ಬಿ.ಎಮ್‌. ಮಾಳಿ, ಕ.ಪ್ರೌ.ಶಾ.ಸ.ಶಿ. ಸಂಘದ ಜಿಲ್ಲಾ ಕಾರ್ಯದರ್ಶಿ ಜೆ.ಎ.ನಿಲಜಗಿ, ಎಸ್‌.ಆರ್‌. ಕಂಬಾರ, ಎಚ್‌.ಬಿ.ಬೆನ್ನಾಡೆ, ಪಿ.ಎಸ್‌. ಶಾರಬಿದ್ರೆ ಹಾಗೂ ಪರೀಕ್ಷಾ ಕೇಂದ್ರಗಳ ಪ್ರೌಢಶಾಲೆ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next