Advertisement

ಬ್ಯಾನರ್‌-ಫ್ಲೆಕ್ಸ್‌ ತೆರವಿಗೆ ಕಟ್ಟುನಿಟ್ಟಿನ ಸೂಚನೆ

11:22 AM Mar 30, 2018 | Team Udayavani |

ಚಿತ್ರದುರ್ಗ: ರಾಜ್ಯ ವಿಧಾನಸಭಾ ಚುನಾವಣೆಗೆ ಚುನಾವಣಾ ನೀತಿಸಂಹಿತೆ ಜಾರಿಗೊಂಡಿರುವ ಹಿನ್ನೆಲೆಯಲ್ಲಿ ಆಯಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈ ಹಿಂದೆ ಹಾಕಲಾಗಿರುವ ಪೋಸ್ಟರ್‌, ಬ್ಯಾನರ್‌ ಹಾಗೂ ಫ್ಲೆಕ್ಸ್‌ಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವಿ.ವಿ. ಜ್ಯೋತ್ಸ್ನಾ, ಎಲ್ಲ ತಾಲೂಕುಗಳ ಚುನಾವಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಚುನಾವಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿ ಮತದಾನಕ್ಕೆ ಇವಿಎಂ ಮತ್ತು ವಿವಿ ಪ್ಯಾಟ್‌ ಮತಯಂತ್ರವನ್ನು ಬಳಕೆ ಮಾಡಲಾಗುತ್ತಿದೆ. ಈ ಮತಯಂತ್ರಗಳನ್ನು ಮತದಾನ ಕೇಂದ್ರಗಳಿಗೆ ತೆಗೆದುಕೊಂಡು ಹೋಗಿ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಪ್ರತಿ ಮತಗಟ್ಟೆಯಲ್ಲಿ ಕಡ್ಡಾಯವಾಗಿ ಶೌಚಾಲಯ, ವಿದ್ಯುತ್‌ ಸಂಪರ್ಕ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಇದೇ ವ್ಯವಸ್ಥೆ ಪ್ರತಿ ನಗರ, ಪಟ್ಟಣ, ಮತ್ತು ಪುರಸಭೆಗಳ ವಾರ್ಡ್‌ಗಳಲ್ಲಿರುವ ಮತಗಟ್ಟೆಗಳಲ್ಲಿಯೂ ಇರುವಂತೆ ನೋಡಿಕೊಳ್ಳಬೇಕೆಂದು ಸೂಚಿಸಿದರು.

ಯಾವ ಮತಗಟ್ಟೆಯಲ್ಲಿ ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿದೆ ಹಾಗೂ ಮಹಿಳೆಯರ ಮತದಾನ ಕಡಿಮೆ ಆಗಿದೆ ಎಂಬ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಮುಕ್ತ, ಹಾಗೂ ಶಾಂತಿಯುತವಾದ ಚುನಾವಣೆ ನಡೆಯಬೇಕು. ಮತದಾರರು ಯಾವುದೇ ಆಮಿಷ, ಒತ್ತಡಗಳಿಗೆ ಒಳಗಾಗಬಾರದು.

ಮತದಾನ ಮಾಡದಂತೆ ಯಾರಾದರೂ ತಡೆಯುತ್ತಾರೆ, ಬೆದರಿಕೆ ಒಡ್ಡುತ್ತಾರೆ ಎಂಬ ಬಗ್ಗೆ ಪರಿಶೀಲನೆ ನಡೆಸಿ ಮತದಾರನಿಗೆ ಯಾವುದೇ ಭಯವಿಲ್ಲದಂತೆ ಅಧಿಕಾರಿಗಳು ವಿಶ್ವಾಸ ಮೂಡಿಸಬೇಕು ಎಂದರು.

Advertisement

ಎಲ್ಲಾ ವಿಧಾನಸಭಾ ಕ್ಷೇತ್ರಗಳ ಆರ್‌ ಒಗಳು ನೋಡಲ್‌ ಅಧಿಕಾರಿಗಳು, ಸೆಕ್ಟರ್‌ ಅಧಿಕಾರಿಗಳು ಚುನಾವಣೆ ಸಿದ್ಧತೆಗೆ  ಬಂಧಿಸಿದಂತೆ ಯಾವುದೇ ಮಾಹಿತಿ ಇದ್ದಲ್ಲಿ ಕೂಡಲೇ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು. ನೀತಿ ಸಂಹಿತೆ ಜಾರಿಯಾಗಿರುವುದರಿಂದ ಎಲ್ಲಾ ಸರ್ಕಾರಿ ಪ್ರವಾಸಿ ಮಂದಿರಗಳು ಹಾಗೂ ಸರ್ಕಾರಿ ವಾಹನಗಳು ಜಿಲ್ಲಾಡಳಿತದ ಕಾರ್ಯವ್ಯಾಪ್ತಿಗೆ ಒಳಪಡುತ್ತವೆ. ಯಾವುದೇ ಸರ್ಕಾರಿ ಶಾಲಾ ಆವರಣಗಳಲ್ಲಿ ರಾಜಕೀಯ ಪಕ್ಷಗಳ ಸಭೆ, ಸಮಾರಂಭಗಳಿಗೆ ಅನುಮತಿ ನೀಡದಂತೆ ತಿಳಿಸಿದರು.

ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಇಂದಿರಾ ಕ್ಯಾಂಟೀನ್‌ಗೆ ಹಾಕಲಾಗಿದ್ದ ದಿ| ಇಂದಿರಾ ಗಾಂಧಿ ಭಾವಚಿತ್ರವನ್ನು ಬಟ್ಟೆಯಿಂದ ಮುಚ್ಚಲಾಯಿತು. ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಿ.ಎನ್‌ ರವೀಂದ್ರ, ಅಪರ ಜಿಲ್ಲಾಧಿಕಾರಿ ಕೆ. ಸಂಗಪ್ಪ, ಉಪವಿಭಾಗಾಧಿಕಾರಿ ವಿಜಯ್‌ ಕುಮಾರ್‌ ಹಾಗೂ ಜಿಎಲ್ಲ ತಾಲೂಕುಗಳ ಚುನಾವಣಾ ಕಾರಿಗಳು ಭಾಗವಹಿಸಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next