Advertisement

ಕ್ವಾರಂಟೈನ್‌ ನಿಯಮ ಪಾಲನೆಗೆ ಕಟ್ಟುನಿಟ್ಟಿನ ಸೂಚನೆ

08:01 AM Jun 10, 2020 | Suhan S |

ಯಾದಗಿರಿ: ಹೋಂ ಕ್ವಾರಂಟೈನ್‌ನಲ್ಲಿರುವವರು ಅವಧಿ ಮುಗಿಯುವವರೆಗೆ ಮನೆ ಬಿಟ್ಟು ಹೊರಬರಬಾರದು. ನಿಯಮ ಉಲ್ಲಂಘಿಸಿ ತಿರುಗಾಡುವುದು ಕಂಡುಬಂದಲ್ಲಿ ಅಂಥವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವ ಜೊತೆಗೆ ಪುನಃ ಸಾಂಸ್ಥಿಕ ಕ್ವಾರಂಟೈನ್‌ಗೆ ಕಳುಹಿಸಲು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಲ್ಲೆಯ ಘೋಷಿತ ಕಂಟೇನ್ಮೆಂಟ್‌ ಝೋನ್‌ಗಳಾದ ವೆಂಕಟೇಶ ನಗರ (ಅಲ್ಲಿಪುರ ತಾಂಡಾ), ಕಂಚಗಾರಹಳ್ಳಿ ತಾಂಡಾ, ಚಾಮನಳ್ಳಿ ತಾಂಡಾಗಳಿಗೆ ಮಂಗಳವಾರ ಭೇಟಿ ನೀಡಿ ಕೈಗೊಂಡಿರುವ ಬಂದೋಬಸ್ತ್ ಕ್ರಮಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.

ನಿಯಂತ್ರಿತ ವಲಯದ ಎಲ್ಲ ಪ್ರವೇಶ ದ್ವಾರಗಳಲ್ಲೂ ಶಾಶ್ವತವಾಗಿ ತಡೆಗೋಡೆ ಹಾಕುವ ಮೂಲಕ ನಾಕಾಬಂಧಿ ಮಾಡಬೇಕು. ಒಂದೇ ಒಂದು ಪ್ರವೇಶ ಮತ್ತು ನಿರ್ಗಮನ ದ್ವಾರವಿರಬೇಕು. ಯಾವುದೇ ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬಾರದು. ನಿಯಂತ್ರಿತ ಪ್ರದೇಶದಲ್ಲಿ ಯಾವುದೇ ವ್ಯಕ್ತಿ ಮನೆಯಿಂದ ಹೊರಗಡೆ ಬರಲು ಅವಕಾಶವಿಲ್ಲ. ಇಡೀ ಪ್ರದೇಶ ಸೀಲ್‌ ಆಗಿರುವಂತೆ ನೋಡಿಕೊಳ್ಳುವ ಮತ್ತು ಕಟ್ಟುನಿಟ್ಟಿನ ಕರ್ಫ್ಯೂ ಜಾರಿ ಮಾಡುವಂತೆ ಪೊಲೀಸರಿಗೆ ಸೂಚಿಸಿದರು.

ನಿಯಂತ್ರಿತ ವಲಯದಲ್ಲಿ ಆರಂಭಿಸಿರುವ ಆರೋಗ್ಯ ಔಟ್‌ ಪೋಸ್ಟ್‌ನಲ್ಲಿ ಒಬ್ಬರು ವೈದ್ಯರು ಹಾಗೂ ಸತತ ಐಇಸಿ ಪ್ರಚಾರದ ಜೊತೆಗೆ ದಿನಕ್ಕೆರಡು ಬಾರಿ ಜನಸಂಪರ್ಕಗಳ ಪತ್ತೆ ಕಾರ್ಯಕ್ಕೆ ಅಗತ್ಯ ಸಂಖ್ಯೆಯ ಕ್ಷೇತ್ರ ಸಿಬ್ಬಂದಿಯನ್ನು ನಿಯೋಜಿಸಬೇಕು. ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿಯಂತ್ರಿತ ವಲಯಗಳಲ್ಲಿ ಸ್ವತ್ಛತೆ ಕಾಪಾಡಬೇಕು. ಘನತ್ಯಾಜ್ಯ ನಿರ್ವಹಣೆ ಮತ್ತು ಸೋಂಕು ನಿವಾರಕಗಳ ಸಿಂಪಡಣೆ ಮಾಡಬೇಕು. ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಾರದು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಹೋಂ ಕ್ವಾರಂಟೈನ್‌ ಪಾಲನೆ ಮಾಡುತ್ತಿರುವ ಜಿಲ್ಲೆಯ ವಲಸೆ ಕಾರ್ಮಿಕರಿಗೆ ಅಜೀಂ ಪ್ರೇಮಜೀ ಫೌಂಡೆಷನ್‌ ವತಿಯಿಂದ ಆಹಾರ ಧಾನ್ಯದ ಕಿಟ್‌ ಗಳನ್ನು ವಿತರಿಸಲಾಗುತ್ತಿದೆ. ಮನೆಯಲ್ಲಿ ವೃದ್ಧರು, ಮಕ್ಕಳು ಮತ್ತು ಗರ್ಭಿಣಿಯರು ಇದ್ದಲ್ಲಿ ಅಂಥವರಿಂದ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಮಾಸ್ಕ್ ಧರಿಸಬೇಕು. ಆರೋಗ್ಯ ಸಮಸ್ಯೆಗಳು ಕಂಡುಬಂದರೆ ಜಿಲ್ಲಾಡಳಿತದ ಕಂಟ್ರೋಲ್‌ ರೂಮ್‌ ಸಹಾಯವಾಣಿ: 08473 253950 ಸಂಖ್ಯೆಗೆ ಸಂಪರ್ಕಿಸಲು ತಿಳಿಸಬೇಕು ಎಂದರು.

Advertisement

ಇದೇ ವೇಳೆಯರಗೋಳ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ವಾಹನಗಳ ಓಡಾಟ ಮತ್ತು ಪೊಲೀಸ್‌ ಬಂದೋಬಸ್ತ್ ಬಗ್ಗೆ ಮಾಹಿತಿ ಪಡೆದುಕೊಂಡರು. ಎ ಋಷಿಕೇಶ್‌ ಸೋನವಣೆ, ತಹಶೀಲ್ದಾರ್‌ ಚೆನ್ನಮಲ್ಲಪ್ಪ ಘಂಟಿ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next